ಬಂಟ್ವಾಳ ಕ್ಷೇತ್ರದ ನಾನಾ ಅಬಿವೃದ್ಧಿ ಕಾರ್ಯಗಳಿಗೆ 25 ಕೋಟಿ ರೂಗಳನ್ನು ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ತಿಳಿಸಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಶಾಸಕರು, ಬಂಟ್ವಾಳ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ 25 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ ಮಾಡಿದರು. ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಯವರು ಅನುದಾನ ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ . ಇದೇ ವೇಳೆ ಶ್ರೀ ಕ್ಷೇತ್ರ ಒಡಿಯೂರು ಸಂಸ್ಥಾನಮ್ ಮತ್ತು ಶ್ರೀ ಒಡಿಯೂರು ವಿ.ಸೌ.ಸ. ನಿಂದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅನಾಹುತದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರ ನೆರೆ ಪರಿಹಾರ ನಿಧಿಗೆ ನೀಡಲಾದ 10 ಲಕ್ಷ ರೂ.ವಿನ ನೆರವಿನ ಚೆಕ್ ನ್ನು ಶಾಸಕ ಯು.ರಾಜೇಶ್ ನಾಯ್ಕ್ ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಿದರು.
Be the first to comment on "ಬಂಟ್ವಾಳ ಕ್ಷೇತ್ರ ಅಭಿವೃದ್ಧಿ ಕಾರ್ಯಗಳಿಗೆ 25 ಕೋಟಿ ರೂ: ರಾಜೇಶ್ ನಾಯ್ಕ್"