ಪುಂಜಾಲಕಟ್ಟೆ ಪಿಲಾತಬೆಟ್ಟು ಗ್ರಾಪಂ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಿವಿಧ ಸವಲತ್ತುಗಳನ್ನು ವಿತರಿಸಿದರು. ಪಿಲಾತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ (ರಿ.) ಪುಂಜಾಲಕಟ್ಟೆ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಮೂರ್ಜೆ ಸರಕಾರಿ ಹಿ.ಪ್ರಾಥಮಿಕ ಶಾಲೆ, ಅರಳ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಚಾರ್ಮಾಡಿ ಸರಕಾರಿ ಪ್ರಾಥಮಿಕ ಶಾಲೆಗೆ ಸುಮಾರು 4 ಲಕ್ಷ ರೂ ವೆಚ್ಚದಲ್ಲಿ ಬೆಂಚು ಹಾಗೂ ಡೆಸ್ಕ್ ಗಳನ್ನು ವಿತರಿಸಿದರು.
ಸವಲತ್ತುಗಳನ್ನು ವಿತರಿಸಿದ ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು.
ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸದಸ್ಯ ರಮೇಶ್ ಕುಡ್ಮೇರು, ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗ್ರಾ.ಪಂ.ಅಧ್ಯಕ್ಷ ಶೇಖರ್ ಶೆಟ್ಟಿ ಕುಮಂಗಿಲ, ಇರ್ವತ್ತೂರು ಗ್ರಾ.ಪಂ.ಉಪಾಧ್ಯಕ್ಷ ಶಂಕರ್ ಶೆಟ್ಟಿ ಬೆದ್ರಮಾರ್, ಉಪಾಧ್ಯಕ್ಷೆ ಲಕ್ಮೀ ಜೆ.ಬಂಗೇರ, ಸದಸ್ಯ ರಾದ ಲಕ್ಮೀನಾರಾಯಣ ಹೆಗ್ಡೆ, ಯೋಗೇಂದ್ರ, ಸರೋಜ ಡಿ.ಶೆಟ್ಟಿ, ವಸಂತಿ, ಸೀತಾ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಲಕ್ಮೀನಾರಾಯಣ ಉಡುಪ, ವಾಮದಪದವು ಸೇವ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಮುಖ್ಯಕಾರ್ಯನಿರ್ವಣಾಧಿಕಾರಿ ಮಂಜಪ್ಪ ಮೂಲ್ಯ, ಪಿಡಿಒ ರಾಜಶೇಖರ್ ರೈ, ಕಂದಾಯ ನಿರೀಕ್ಷಕ ನವೀನ್, ಮತ್ತಿರರು ಉಪಸ್ಥಿತರಿದ್ದರು.
ಕಾಲೇಜಿನ ಪೀಠೋಪಕರಣ ಕ್ಕೆ ಧನಸಹಾಯ ನೀಡಿದ ಹನುಮಂತ ಹಳ್ಳಿಗೇರಿ, ಹಮೀದ್ ದುಗ್ಗಮರಗುಡ್ಡೆ ಅವರನ್ನು ಅಭಿದಿನಂದಿಸಲಾಯಿತು. ಪಿ.ಎಂ.ಪ್ರಭಾಕರ್ ಪ್ರಸ್ತಾವಿಕವಾಗಿ ಮಾತನಾಡಿದರು. ಪಿ.ಡಿ.ಒ. ರಾಜಶೇಖರ ರೈ ಸ್ವಾಗತಿಸಿ ವಂದಿಸಿದರು.
Be the first to comment on "ಪಿಲಾತಬೆಟ್ಟು: ಶಾಸಕರಿಂದ ಸವಲತ್ತು ವಿತರಣೆ"