ಪುಂಜಾಲಕಟ್ಟೆ

ಪಿಲಾತಬೆಟ್ಟು: ಶಾಸಕರಿಂದ ಸವಲತ್ತು ವಿತರಣೆ

ಪುಂಜಾಲಕಟ್ಟೆ ಪಿಲಾತಬೆಟ್ಟು ಗ್ರಾಪಂ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಿವಿಧ ಸವಲತ್ತುಗಳನ್ನು ವಿತರಿಸಿದರು. ಪಿಲಾತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ (ರಿ.) ಪುಂಜಾಲಕಟ್ಟೆ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಮೂರ್ಜೆ ಸರಕಾರಿ ಹಿ.ಪ್ರಾಥಮಿಕ ಶಾಲೆ, ಅರಳ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಚಾರ್ಮಾಡಿ ಸರಕಾರಿ ಪ್ರಾಥಮಿಕ ಶಾಲೆಗೆ ಸುಮಾರು 4 ಲಕ್ಷ ರೂ ವೆಚ್ಚದಲ್ಲಿ ಬೆಂಚು ಹಾಗೂ ಡೆಸ್ಕ್ ಗಳನ್ನು ವಿತರಿಸಿದರು.

ಸವಲತ್ತುಗಳನ್ನು ವಿತರಿಸಿದ ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು.

ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸದಸ್ಯ ರಮೇಶ್ ಕುಡ್ಮೇರು, ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗ್ರಾ.ಪಂ.ಅಧ್ಯಕ್ಷ ಶೇಖರ್ ಶೆಟ್ಟಿ ಕುಮಂಗಿಲ, ಇರ್ವತ್ತೂರು ಗ್ರಾ.ಪಂ.ಉಪಾಧ್ಯಕ್ಷ ಶಂಕರ್ ಶೆಟ್ಟಿ ಬೆದ್ರಮಾರ್, ಉಪಾಧ್ಯಕ್ಷೆ ಲಕ್ಮೀ ಜೆ.ಬಂಗೇರ, ಸದಸ್ಯ ರಾದ ಲಕ್ಮೀನಾರಾಯಣ ಹೆಗ್ಡೆ, ಯೋಗೇಂದ್ರ, ಸರೋಜ ಡಿ.ಶೆಟ್ಟಿ, ವಸಂತಿ, ಸೀತಾ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಲಕ್ಮೀನಾರಾಯಣ ಉಡುಪ, ವಾಮದಪದವು ಸೇವ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಮುಖ್ಯಕಾರ್ಯನಿರ್ವಣಾಧಿಕಾರಿ ಮಂಜಪ್ಪ ಮೂಲ್ಯ, ಪಿಡಿಒ ರಾಜಶೇಖರ್ ರೈ, ಕಂದಾಯ ನಿರೀಕ್ಷಕ ನವೀನ್,  ಮತ್ತಿರರು ಉಪಸ್ಥಿತರಿದ್ದರು.

ಕಾಲೇಜಿನ ಪೀಠೋಪಕರಣ ಕ್ಕೆ ಧನಸಹಾಯ ನೀಡಿದ ಹನುಮಂತ ಹಳ್ಳಿಗೇರಿ, ಹಮೀದ್ ದುಗ್ಗಮರಗುಡ್ಡೆ ಅವರನ್ನು ಅಭಿದಿನಂದಿಸಲಾಯಿತು. ಪಿ.ಎಂ.ಪ್ರಭಾಕರ್ ಪ್ರಸ್ತಾವಿಕವಾಗಿ ಮಾತನಾಡಿದರು. ಪಿ.ಡಿ.ಒ. ರಾಜಶೇಖರ ರೈ ಸ್ವಾಗತಿಸಿ ವಂದಿಸಿದರು.

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts