ಬಂಟ್ವಾಳ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮುಂಬೈನ ಆಲ್ ಕಾರ್ಗೊ ಲಾಜಿಸ್ಟಿಕ್ಸ್ ಲಿಮಿಟೆಡ್ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ತುಂಬೆಯಲ್ಲಿರುವ ಬಂಟ್ವಾಳ ಬಂಟರ ಭವನದಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮತ್ತು ಮೂರನೇ ಬಾರಿ ಸಂಸದರಾಗಿ ಆಯ್ಕೆಗೊಂಡ ನಳಿನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಶ್ರೀ ದೇವಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸದಾನಂದ ಶೆಟ್ಟಿ, ಅಲ್ ಕಾರ್ಗೊ ಲಾಜಿಸ್ಟಿಕ್ ನ ಸಿಎಸ್ ಆರ್ ಮುಖ್ಯಾಧಿಕಾರಿ ಡಾ.ನೀಲ್ ರತನ್ ಆರ್. ಶೆಂಡೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ, 40 ಲಕ್ಷ ಮೊತ್ತದ ವಿದ್ಯಾರ್ಥಿವೇತನವನ್ನು ಒಟ್ಟು 1100 ಮಂದಿಗೆ ನೀಡಲಾಗುತ್ತಿದೆ ಎಂದರು. ಬಂಟರ ಸಂಘದ ಉಪಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಕಾರ್ಯದರ್ಶಿ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ, ಖಜಾಂಚಿ ಜಗದೀಶ ಶೆಟ್ಟಿ ಇರಾಗುತ್ತು, ಸಹಕಾರ್ಯದರ್ಶಿ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಸಮಿತಿ ಸಂಚಾಲಕ ಎಚ್. ಸಂಕಪ್ಪ ಶೆಟ್ಟಿ, ಮಹಿಳಾ ವಿಭಾಗ ಅಧ್ಯಕ್ಷೆ ಆಶಾ ಪ್ರಸಾದ್ ರೈ ಉಪಸ್ಥಿತರಿದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.