ವಾಹನದಲ್ಲಿ ಸಾಗುವವರನ್ನು ದರೋಡೆ ಮಾಡುವ ಉದ್ದೇಶದಿಂದ ಮಾರಕಾಯುಧಗಳೊಂದಿಗೆ ಅನುಮಾನಾಸ್ಪದವಾಗಿ ನಿಂತಿದ್ದ ಆರೋಪದ ಮೇರೆಗೆ ಐವರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕತ್ತಿ, ಸುಮಾರು 2 ಗ್ರಾಂ ತೂಕವಿರುವ ಗಾಂಜಾ ಮೋಗ್ಗು ವಶಪಡಿಸಿಕೊಂಡಿದ್ದಾರೆ.
ಬುಧವಾರ ಬೆಳಗ್ಗೆ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಠಾಣಾ ಸಿಬ್ಬಂದಿ ಜೊತೆ ಗಸ್ತು ತಿರುಗುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಮಂಚಿ ಗ್ರಾಮ ಮಂಚಿ ಕಟ್ಟೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದ ಉಮ್ಮರ್ ಫಾರೂಕ್ (26), ಮಹಮ್ಮದ್ ಅಬೂಬಕ್ಕರ್ (21), ಅಬ್ದುಲ್ ಖಾದರ್(40), ರಮೀಜ್ (22) ಮತ್ತು ಖಲೀಲ್ (24) ಎಂಬವರನ್ನು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಅಕ್ಬರ್ ಎಂಬಾತ ತಪ್ಪಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)