ಶನಿವಾರ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ಸಿಂಧು ಬಿ.ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ.
1989ರಲ್ಲಿ ರಂಜನಿ ಶ್ರೀಕುಮಾರ್ ಎಂಬವರು ಅವಿಭಜಿತ ದ.ಕ.ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು.
ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಜಿಲ್ಲೆಯ 129ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿಂಧು ಅವರನ್ನು ಅಪರ ಜಿಲ್ಲಾಧಿಕಾರಿ ರೂಪಾ ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.
ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.
www.bantwalnews.com Editor: Harish Mambady

Be the first to comment on "ಸಿಂಧು ರೂಪೇಶ್ ದ.ಕ. ಜಿಲ್ಲೆಯ ಎರಡನೇ ಮಹಿಳಾ ಡಿಸಿ"