ಬರಿಮಾರ್ ಚರ್ಚ್ ನಲ್ಲಿ ತೆನೆಹಬ್ಬ ಆಚರಣೆ

ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಬರಿಮಾರ್ ಚರ್ಚ್ ನಲ್ಲಿ ಭಾನುವಾರ ಮಾತೆ ಮರಿಯಮ್ಮನವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ನೂತನವಾಗಿ ಉದ್ಘಾಟನೆಗೊಂಡ ಮಾತೆ ಮರಿಯಮ್ಮನವರಿಗೆ ಸಮರ್ಪಿತ ಗ್ರೊಟ್ಟೊದಲ್ಲಿ ಎಲ್ಲಾ ಭಕ್ತಾದಿಗಳು ಹೂಗಳನ್ನು ಅರ್ಪಿಸುವ ಮುಖಾಂತರ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು.

ಎಲ್ಲಾ ಕ್ರೈಸ್ತ ಭಕ್ತಾದಿಗಳು ಕುಟುಂಬ ಸಮೇತ  ಚರ್ಚ್ ಗೆ ಆಗಮಿಸಿ ದಿವ್ಯ ಬಲಿ ಪೂಜೆಯಲ್ಲಿ ಭಾಗವಹಿಸಿ ಪರಮ ಪ್ರಸಾದವನ್ನು ಸ್ವೀಕರಿಸಿ ಚರ್ಚ್ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ಆಶೀರ್ವಚಿಸಿದ ತೆನೆಗಳನ್ನು ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಎನ್ನುವ ಬೇಧಭಾವವಿಲ್ಲದೆ ಪರಸ್ಪರ ಒಬ್ಬರಿಗೊಬ್ಬರು ಹಂಚಿಕೊಂಡರು. ಕಳೆದ 125 ವರ್ಷಗಳಲ್ಲಿ ಹೇಗೆ ಪ್ರೀತಿಯಿಂದ ಜೀವನವನ್ನು ನಡೆಸುತ್ತಾ ಬಂದಿದ್ದೀರಿ ಹಾಗೆಯೇ ಇನ್ನು ಮುಂದೆಯೂ ಪರಸ್ಪರ ಒಬ್ಬರಿಗೊಬ್ಬರು ಕ್ಷಮಿಸುತ್ತಾ ಒಳ್ಳೆಯ ಜೀವನವನ್ನು ನಡೆಸಲು ಫಾದರ್ ಪಿರೇರಾ ಕರೆ ನೀಡಿದರು. ಚರ್ಚ್ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ದಾನಿಗಳ ಹೆಸರುಗಳನ್ನು ವಾಚಿಸಿದರು. ಧರ್ಮಗುರುಗಳು ಎಲ್ಲರಿಗೂ ತೆನೆಗಳನ್ನು ನೀಡುವ ಮುಖಾಂತರ ಸನ್ಮಾನಿಸಿದರು. ಕಾರ್ಯದರ್ಶಿ ಪ್ರೀತಿ ಪಿರೇರಾ ಮತ್ತು ಸಿಸ್ಟರ್ ನ್ಯಾನ್ಸಿ ಉಪಸ್ಥಿತರಿದ್ದರು. ಎಲ್ಲಾ ಭಕ್ತಾದಿಗಳಿಗೂ ಕಬ್ಬನ್ನು ಹಾಗೂ ಸಿಹಿಯನ್ನು ಹಂಚಲಾಯಿತು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬರಿಮಾರ್ ಚರ್ಚ್ ನಲ್ಲಿ ತೆನೆಹಬ್ಬ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*