ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನಿಂದ ಮಾಣಿ ಜಂಕ್ಷನ್ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ಸೆ.11ರಂದು ಕಾಂಗ್ರೆಸ್ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ಏರ್ಪಡಿಸಿದೆ.
ವಾಹನ ಸಂಚಾರಕ್ಕೆ ಅಡಚಣೆಯಾಗಿ ಸಾರ್ವಜನಿಕರು ತೊಂದರೆಗೊಳಾಗಾಗಿದ್ದಾರೆ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಅಥವಾ ಸಂಭಂದಪಟ್ಟ ಅಧಿಕಾರಿಗಳಾಗಲಿ ಇದರ ಬಗ್ಗೆ ಯಾವುದೇ ರೀತಿಯ ಗಮನಹರಿಸದ್ದು ಖಂಡನೀಯವಾಗಿದೆ ಎಂದು ಆರೋಪಿಸಿ ಸರಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲು ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬೆಳಿಗ್ಗೆ 10ಕ್ಕೆ ಮೆಲ್ಕಾರ್ ಜಂಕ್ಷನ್‌ನಲ್ಲಿ ಪ್ರತಿಭಟನಾ ಸಭೆ ಬಳಿಕ ಪಾದಯಾತ್ರೆ ಮೂಲಕ ಬಿ.ಸಿ.ರೋಡ್‌ನ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಯವರಿಗೆ ಬಂಟ್ವಾಳ ತಾಲೂಕಿನ ದಂಡಾಧಿಕಾರಿ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ವಾಹನ ಮಾಲಕರು ಹಾಗೂ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವರು ವಿನಂತಿಸಿದ್ದಾರೆ.
Be the first to comment on "ರಸ್ತೆ ಹೊಂಡ: 11ರಂದು ಮೇಲ್ಕಾರ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ, ಪಾದಯಾತ್ರೆ"