ಗೋಳ್ತಮಜಲು ಮಂಚಿ ರಸ್ತೆ ದುರಸ್ತಿ: ಆಟೊ ಚಾಲಕರಿಂದ ಮನವಿ

ಗೋಳ್ತಮಜಲಿನಿಂದ ಬೋಳಂತೂರು, ಮಂಚಿ ರಸ್ತೆಯ ಮರುಡಾಮರೀಕರಣ ಹಾಗೂ ಚರಂಡಿ ವ್ಯವಸ್ಥೆಗೊಳಿಸುವಂತೆ ಬೋಳಂತೂರು ರಿಕ್ಷಾ ಚಾಲಕ – ಮಾಲಕ ಸಂಘದವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು. ಅವರಿಗೆ ಮನವಿ ಸಲ್ಲಿಸಿದರು.

ಈ ಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರ ಹಾಗೂ ನಡೆದಾಡಲು ಕಷ್ಟಕರವಾಗಿದೆ, ಇಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದಾಡುತ್ತಿದ್ದು ವಾಹನ ಸಂಚರಿಸುವಾಗ ಶಾಲಾ ಮಕ್ಕಳ ಮೇಲೆ ಕೆಸರು ನೀರಿನ ಸಿಂಚನವಾಗುತ್ತಿದೆ, ರಸ್ತೆಯ ಮರು ಡಾಮರೀಕರಣ ಹಾಗೂ ಚರಂಡಿ ನಿರ್ಮಿಸುವ ಮೂಲಕ ಜನತೆಯ ಸಂಕಷ್ಟವನ್ನು ನಿವಾರಿಸುವಂತೆ ಮನವಿಯಲ್ಲಿ ವಿನಂತಿಸಲಾಗಿದೆ. ಈ ಸಂದರ್ಭ ರಿಕ್ಷಾ ಚಾಲಕ – ಮಾಲಕ ಸಂಘದ ಅದ್ಯಕ್ಷ ಎಸ್.ಎಚ್.ಅಬೂಬಕ್ಕರ್, ಕಾರ್ಯದರ್ಶಿ ಹಸೈನಾರ್, ಪ್ರಮುಖರಾದ ದುನಿಯಾ ಅದ್ರಾಮ ಬೋಳಂತೂರು, ಉದಯ ಕುಮಾರ್, ಬಿ.ಕೆ.ಅಬ್ದುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗೋಳ್ತಮಜಲು ಮಂಚಿ ರಸ್ತೆ ದುರಸ್ತಿ: ಆಟೊ ಚಾಲಕರಿಂದ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*