ತುಳು ಲಿಪಿ ಶಿಕ್ಷಕ, ಕಸಾಪ ಮಾಜಿ ತಾಲೂಕು ಅಧ್ಯಕ್ಷ ಬಿ.ತಮ್ಮಯ್ಯ ನಿಧನ

ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಮಾಜಿ ಅಧ್ಯಕ್ಷ, ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿ, ತುಳು ಲಿಪಿಯನ್ನು ಶಾಲೆಗಳಲ್ಲಿ ಕಲಿಸುವ ಮೂಲಕ ಜನಪ್ರಿಯರಾಗಿದ್ದ ಬಿ.ತಮ್ಮಯ್ಯ (71) ಮಂಗಳವಾರ (ಸೆ.10) ಮಧ್ಯಾಹ್ನ 2.50ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪತ್ನಿ ಇಂದುಮತಿ, ಪುತ್ರ ನಿಶಾಂತ್ ಮತ್ತು ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಬಂಟ್ವಾಳ ಬಿ.ಸಿ.ರೋಡಿನ ಕೈಕುಂಜೆ ನಿವಾಸಿಯಾಗಿದ್ದ ಅವರು ಹಲವು ವರ್ಷಗಳ ಕಾಲ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ಸಲ್ಲಿಸಿದ್ದರು.

ಜಾಹೀರಾತು

ಬಂಟ್ವಾಳ ನ್ಯೂಸ್ ನಲ್ಲಿ ಅವರು ಬರೆಯುತ್ತಿದ್ದ ಅಂಕಣ ನಮ್ಮ ಭಾಷೆ ಜನಪ್ರಿಯವಾಗಿತ್ತು. 

ಸಾಹಿತ್ಯ ಸಾಧಕರು:

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿ ದಿವಂಗತ ಗುಮ್ಮಣ ಪೂಜಾರಿ ಮತ್ತು ಚಿಕ್ಕಮ್ಮ ದಂಪತಿಗಳ ಪುತ್ರರಾಗಿ 1948ರಲ್ಲಿ ಜನನ. ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ, ಪ್ರೌಡಶಿಕ್ಷಣವನ್ನು ನೆರಿಯಲದಲ್ಲಿ, ಹೈಸ್ಕೂಲ್ ಶಿಕ್ಷಣವನ್ನು ಧರ್ಮಸ್ಥಳದಲ್ಲಿ ಪೂರೈಸಿದರು.

ಜಾಹೀರಾತು

ಹೈಸ್ಕೂಲಿನಲ್ಲಿ ಕಬಡ್ಡಿ, ವಾಲಿಬಾಲ್, ಯಕ್ಷಗಾನ,ನಾಟಕಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ತಮ್ಮಯರು ಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲೂ ಭಾಗವಹಿಸುತ್ತಿದ್ದರು. ತುಳು ನಾಟಕಗಳನ್ನು ರಚಿಸಿ, ನಿರ್ದೇಶಿಸಿ, ಅಭಿನಯಿಸಿ, ಯಕ್ಷಗಾನದಲ್ಲಿ ವೇಷಧಾರಿಯಾಗಿ ಕೂಡಾ ಅಭಿನಯಿಸಿದ ಕಲಾವಿದ ತಮ್ಮಯ.

ಉಜಿರೆಯಲ್ಲಿ ಪಿಯುಸಿ ಶಿಕ್ಷಣವನ್ನು ಮುಗಿಸಿ 1972ರಲ್ಲಿ ಮಂಗಳೂರಿನ ಕಸ್ಬಾ ಗ್ರಾಮದಲ್ಲಿ ಗ್ರಾಮ ಕರಣಿಕರ ಹುದ್ದೆಗೆ ಸೇರ್ಪಡೆಗೊಂಡ ಸಮಯದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಸಂಧ್ಯಾ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದುಕೊಂಡರು. ಬಂಟ್ವಾಳ ತಾಲೂಕಿಗೆ ವರ್ಗಾವಣೆಗೊಂಡ ಬಳಿಕ ವಿವಿಧ ಗ್ರಾಮ ಪಂಚಾಯತುಗಳಲ್ಲಿ ಕಾರ್ಯನಿರ್ವಹಿಸಿ 2001ರಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಂದಾಯ ಅಧಿಕಾರಿಯಾಗಿ ಬಂಟ್ವಾಳ ತಾಲೂಕು ಕಛೇರಿಯಲ್ಲಿ ಸೇವೆ ಸಲ್ಲಿಸಿ 2006ರಲ್ಲಿ ವೃತ್ತಿ ಜೀವನದಿಂದ ನಿವೃತ್ತಿ ಹೊಂದಿದರು.

1974ರಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ  ಪ್ರಧಾನ ಕಾರ್ಯದರ್ಶಿಯಾಗಿ 15 ವರ್ಷ ಕೆಲಸ ಮಾಡಿದ ಅನುಭವ ಇವರದ್ದು.

ಜಾಹೀರಾತು

ಬಂಟ್ವಾಳ ಸರಕಾರಿ ನೌಕರರ ಸಂಘದ ಕಟ್ಟಡ ಸಮಿತಿಯ ಉಪಾಧ್ಯಕ್ಷನಾಗಿ. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕಂದಾಯ ನೌಕರರ ಸಂಘದ ಪದಾಧಿಕಾರಿಯಾಗಿ ಕೆಲಸ ನಿರ್ವಹಿಸಿ ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ತಿನಲ್ಲಿ 10ವರ್ಷ ಕಾರ್ಯದರ್ಶಿಯಾಗಿ, 4 ವರ್ಷ ಅಧ್ಯಕ್ಷರಾಗಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ತಮ್ಮಯರು. ಹಣತೆ ,ಕಾಡಿನ ಹಕ್ಕಿ ಹಾಡಿತು, ಶ್ರೀ ನಾರಾಯಣಗುರು ಭಜನೆ, ತಟಪಟ, ಹನಿಪನಿ, ಹನಿಕವಿತೆ ರಚಿಸಿ ಮೊದಲಾದ 6 ಕವನ ಸಂಕಲನ ರಚಿಸಿದ್ದಲ್ಲದೆ, ಚಿಂತನ-ಮಂಥನ ಲೇಖನಗಳ ಸಂಗ್ರಹ, ಹಿಂದಿರುಗಿ ನೋಡಿದಾಗ-ಆತ್ಮಕಥೆ, ಕರಿಕೋಟು ಕಥಾ ಸಂಕಲನಗಳನ್ನು ರಚಿಸಿದ್ದಾರೆ.

ತುಳುವೆರೆ ಪರ್ಬ ತುಳು ಲಿಪಿ ಮತ್ತು ಕನ್ನಡದಲ್ಲಿ ಕವನ ಸಂಕಲನ ಹೊರತರಲಾಗಿದೆ.

ಜಾಹೀರಾತು

ತುಳುವೆತುಳು ಭಾಷಾ ಲಿಪಿಯ ಮೊದಲ ಪತ್ರಿಕೆಯನ್ನು ನಿರಂತರವಾಗಿ ಪ್ರಕಟಿಸಿದ್ದಾರೆ. ತುಳು ಭಾಷಾ ಆಸಕ್ತರಿಗಾಗಿ ತುಳು ಲಿಪಿ ಕಲ್ಪುಲೆ ಎಂಬ ಪುಸ್ತಕವನ್ನು ಹೊರತಂದು ತಾವು ತುಳು ಲಿಪಿ ಶಿಕ್ಷಕನಾಗಿ ಅದೆಷ್ಟೋ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತುಳು ಲಿಪಿಯನ್ನು ಕಲಿಸಿದ್ದಾರೆ  ಈ ವಿಶೇಷ ಸಾಧನೆಯನ್ನು ಗುರುತಿಸಿ ತುಳು ಸಾಹಿತ್ಯ ಅಕಾಡೆಮಿಯಿಂದ ಚಾವಡಿ ತಮ್ಮನ ನೀಡಿ ಸನ್ಮಾನಿಸಲಾಗಿದೆ.

ಒಳಾಂಗಣದಲ್ಲಿ ಧರಿಸಲು ಉಪಯೋಗಿಸುವ ‘‘ಹಾಳೆ ಚಪ್ಪಲಿ”ಯನ್ನು ಜನರು ತುಂಬಾ ಮೆಚ್ಚಿಕೊಂಡಿದ್ದಾರೆ. ಅಡಿಕೆ ಹಾಳೆಯಿಂದ ಚೀಲ, ಹೇಟ್, ಬೀಸಣಿಕೆ ಮೊದಲಾದುವನ್ನು ರಾಷ್ಟ್ರೀಯ ಸೇವಾ ಯೋಜನೆ ಮಕ್ಕಳಿಗೆ ತಯಾರಿಸಲು ತರಬೇತಿ ನೀಡುವುದು, ಹೀಗೆ ಸರಕಾರಿ ನೌಕರಿಯಲ್ಲಿದ್ದುಕೊಂಡು ಸಾರ್ವಜನಿಕರೊಡನೆ ನಿರಂತರ ಸಂಪರ್ಕವನ್ನಿರಿಸಿಕೊಂಡಿದ್ದರು. 32 ವರ್ಷಗಳಿಂದ ಯುವವಾಹಿನಿ ಸಲಹೆಗಾರರಾಗಿ ಬಂಟ್ವಾಳದ ಸ್ಥಾಪಕಾಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಳು ಲಿಪಿ ಶಿಕ್ಷಕ, ಕಸಾಪ ಮಾಜಿ ತಾಲೂಕು ಅಧ್ಯಕ್ಷ ಬಿ.ತಮ್ಮಯ್ಯ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*