ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯ ಹಳೇ ಸೇತುವೆ ಬಳಿ ಇದ್ದ ಸುಣ್ಣದಗೂಡು ಮತ್ತು ಸುಮಾರು 14 ಕಟ್ಟಡಗಳನ್ನು ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ತೆರವುಗೊಳಿಸಲಾಗಿದೆ.
ಬಿಗು ಪೊಲೀಸ್ ಬಂದೋಬಸ್ತ್ ನೊಂದಿಗೆ ಕಂದಾಯ, ಪುರಸಭೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಸಹಿತ ಕಂದಾಯ, ಪುರಸಭೆ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಎಸ್ಸೈಗಳಾದ ಚಂದ್ರಶೇಖರ್, ಪ್ರಸನ್ನ, ಯಲ್ಲಪ್ಪ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದು, ಬಿಗು ಬಂದೋಬಸ್ತ್ ಕೈಗೊಂಡಿದ್ದರು. ಕಾರ್ಯಾಚರಣೆ ನಿಮಿತ್ತ ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಪುರಸಭೆಯ ಎಂಜಿನಿಯರ್ ಡೊನಿಮಿಕ್ ಡಿಮೆಲ್ಲೊ, ಕಂದಾಯ ಇಲಾಖೆ ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ನಿರೀಕ್ಷಕ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ಮೇಲ್ವಿಚಾರಕ ನಿಸಾರ್ ಅಹಮದ್, ಸರ್ವೇಯರ್ ರಾಘವೇಂದ್ರ, ಪಾಣೆಮಂಗಳೂರು ವಿಎ ವಿಜೇತಾ, ಸಿಬ್ಬಂದಿ ಯಶೋಧ, ಗ್ರಾಮಕರಣಿಕರು, ಗ್ರಾಮ ಸಹಾಯಕರು, ಮೆಸ್ಕಾಂ ಸಹಿತ ನಾನಾ ಇಲಾಖೆಗಳ ಸಿಬ್ಬಂದಿ ಹಾಜರಿದ್ದರು.