ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ಮಂಗಳವಾರ ನಡೆಯಿತು. ತಹಸೀಲ್ದಾರ್ ರಶ್ಮಿ ಎಸ್.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಯಕವೇ ಕೈಲಾಸ ಎಂಬಂತೆ ದುಡಿದು ತಮ್ಮ ಜೀವನ ನಡೆಸುವ ವಿಶ್ವಕರ್ಮ ಸಮುದಾಯ ನಮ್ಮೆಲ್ಲರಿಗೂ ಮಾದರಿ ಎಂದರು.
ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ ಮಾತನಾಡಿ, ವಿಶ್ವಕರ್ಮರು ರಾಜಕೀಯವಾಗಿಯೂ ಹೆಚ್ಚು ಶಕ್ತಿ ಶಾಲಿಗಳಾಗಬೇಕಿದೆ ಎಂದರು.
ಪತ್ರಕರ್ತ ಮೌನೇಶ ವಿಶ್ವಕರ್ಮ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವಕರ್ಮರ ವೈಶಿಷ್ಟ್ಯತೆಗಳ ಬಗ್ಗೆ ವಿವರಿಸಿದರು. ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾತನಾಡಿ, ವಿಶ್ವಕರ್ಮ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ಸ್ಥಾನಮಾನ ದೊರೆತಿಲ್ಲ, ಈ ಬಗ್ಗೆ ಸಮುದಾಯ ಹೆಚ್ಚು ಚಿಂತನೆ ನಡೆಸಬೇಕಿದೆ ಎಂದರು. ಮಾಜಿ ಅಧ್ಯಕ್ಷ ಜಯಪ್ರಕಾಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ , ತಾಲೂಕು ಕಚೇರಿ ಸಿಬ್ಬಂದಿ ಗಳು, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಇದೇ ಸಂದರ್ಭ ವಾಸ್ತುಶಿಲ್ಪಿ ದೇವರಾಜ ಆಚಾರ್ಯ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ವಂದಿಸಿದರು.
Be the first to comment on "ಬಂಟ್ವಾಳ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ"