Categories: ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ  ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ಮಂಗಳವಾರ ನಡೆಯಿತು. ತಹಸೀಲ್ದಾರ್ ರಶ್ಮಿ ಎಸ್.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಯಕವೇ ಕೈಲಾಸ ಎಂಬಂತೆ ದುಡಿದು  ತಮ್ಮ ಜೀವನ ನಡೆಸುವ ವಿಶ್ವಕರ್ಮ ಸಮುದಾಯ ನಮ್ಮೆಲ್ಲರಿಗೂ ಮಾದರಿ ಎಂದರು.

ಜಾಹೀರಾತು

ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ ಮಾತನಾಡಿ, ವಿಶ್ವಕರ್ಮರು ರಾಜಕೀಯವಾಗಿಯೂ ಹೆಚ್ಚು ಶಕ್ತಿ ಶಾಲಿಗಳಾಗಬೇಕಿದೆ ಎಂದರು.

ಪತ್ರಕರ್ತ ಮೌನೇಶ ವಿಶ್ವಕರ್ಮ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವಕರ್ಮರ ವೈಶಿಷ್ಟ್ಯತೆಗಳ ಬಗ್ಗೆ ವಿವರಿಸಿದರು. ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾತನಾಡಿ, ವಿಶ್ವಕರ್ಮ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ಸ್ಥಾನಮಾನ ದೊರೆತಿಲ್ಲ, ಈ ಬಗ್ಗೆ  ಸಮುದಾಯ ಹೆಚ್ಚು ಚಿಂತನೆ ನಡೆಸಬೇಕಿದೆ ಎಂದರು. ಮಾಜಿ ಅಧ್ಯಕ್ಷ ಜಯಪ್ರಕಾಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ , ತಾಲೂಕು ಕಚೇರಿ ಸಿಬ್ಬಂದಿ ಗಳು, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಇದೇ ಸಂದರ್ಭ ವಾಸ್ತುಶಿಲ್ಪಿ ದೇವರಾಜ ಆಚಾರ್ಯ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ, ಕಾರ್ಯಕ್ರ‌ಮ ನಿರೂಪಿಸಿದರು. ಕಂದಾಯ  ನಿರೀಕ್ಷಕ ರಾಮ ಕಾಟಿಪಳ್ಳ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts