ಬೆಳ್ತಂಗಡಿ ತಾಲೂಕಿನ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದವರು 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಾಹೀರಾತು
ಆನೆ ದಂತ ಮಾರಾಟ ಜಾಲವೊಂದನ್ನು ಬೇಧಿಸಿರುವ ಪುತ್ತೂರು ಅರಣ್ಯ ಸಂಚಾರಿ ದಳದವರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ತೂಕ 51 ಕೆ.ಜಿ.
ಆನೆ ದಂತಗಳನ್ನು ಶೇಖರಿಸಿಟ್ಟು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳದವರು ಬೆಳ್ತಂಗಡಿ ತಾಲೂಕಿನ ಸೂರ್ಯ ಎಂಬಲ್ಲಿನ ಮನೆಯೊಂದಕ್ಕೆ ದಾಳಿ ಮಾಡಿದಾಗ ಅಲ್ಲಿ ಹತ್ತು ದಂತಗಳಿರುವುದು ಕಂಡುಬಂದಿದೆ. ಈ ಸಂಬಂಧ ಅಬ್ರಹಾಂ, ಅನ್ವರ್ ಮತ್ತು ಸುರೇಶ್ ಬಾಬು ಎಂಬವರನ್ನು ದಸ್ತಗಿರಿ ಮಾಡಿಕೊಳ್ಳಲಾಗಿದೆ. ಇನ್ನೊಬ್ಬ ಆಪಾದಿತ ತಲೆಮರೆಸಿಕೊಂಡಿದ್ದಾನೆ. ಇದರ ಹಿಂದೆ ದೊಡ್ಡ ಜಾಲವೊಂದು ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ದಂತಚೋರರ ಸೆರೆ, 51 ಕೆ.ಜಿ.ಯ 10 ಆನೆ ದಂತ ವಶಕ್ಕೆ"