ಮಾಣಿ, ಮಣಿನಾಲ್ಕೂರಲ್ಲಿ ಎಪಿಎಂಸಿ ಮುಚ್ಚು ಹರಾಜುಕಟ್ಟೆ ಉದ್ಘಾಟನೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬಂಟ್ವಾಳ ವತಿಯಿಂದ ತಾಲೂಕಿನ ಮಾಣಿ ಎಂಬಲ್ಲಿ ೪೯.೧೯ ಲಕ್ಷ ರೂ ವೆಚ್ಚದಲ್ಲಿ ಹಾಗೂ ಮಣಿನಾಲ್ಕೂರು ಎಂಬಲ್ಲಿ ೧೭.೨೨ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಮುಚ್ಚು ಹರಾಜುಕಟ್ಟೆ ಕಟ್ಟಡಗಳ ಉದ್ಘಾಟನೆ ಮತ್ತು ಗ್ರಾಮ ಪಂಚಾಯತ್‌ಗಳಿಗೆ ಹಸ್ತಾಂತರ ಕಾರ್ಯಕ್ರಮ ಬುಧವಾರ ಮಾಣಿಯಲ್ಲಿ ನಡೆಯಿತು.

ಜಾಹೀರಾತು

ಮಣಿನಾಲ್ಕೂರಿನಲ್ಲಿ ಉದ್ಘಾಟನೆ ಕಾರ್ಯಕ್ರಮದ ಬಳಿಕ ಮಾಣಿಯಲ್ಲಿ ಹರಾಜುಕಟ್ಟೆ ಕಟ್ಟಡವನ್ನು ಉದ್ಘಾಟಿಸಿ, ಸಮಾರಂಭವನ್ನು ಜ್ಯೋತಿ ಬೆಳಗಿಸಿ ಮಾತನಾಡಿದ ಬಂಟ್ವಾಳ ಶಾಸಕ ಯು.ರಾಜೇಶ್ ನಾಕ್, ಹರಾಜುಕಟ್ಟೆಗಳಿಂದ ರೈತರ ಉತ್ಪನ್ನಗಳು ಗ್ರಾಹಕರಿಗೆ ಸುಲಭವಾಗಿ ತಲುಪಲು ವೇದಿಕೆಯಾಗಲಿ ಎಂದು ಶುಭ ಹಾರೈಸಿ. ಕೇಂದ್ರ ಸ್ಥಾನದಲ್ಲಿರುವ ಕಟ್ಟಡ ಸುಸಜ್ಜಿತವಾಗಿ ಜನರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಲಿ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ತನ್ನ ಅವಧಿಯಲ್ಲಿ ಎಪಿಎಂಸಿಗೆ ನೀಡಲಾದ ಅನುದಾನದಿಂದ ಮುಚ್ಚು ಹರಾಜುಕಟ್ಟೆಗಳ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಮಾಣಿ ಬೆಳೆಯುತ್ತಿರುವ ಪ್ರದೇಶವಾಗಿದ್ದು, ಇಲ್ಲಿ ಎಸ್ಪಿ ಕಚೇರಿ, ಸರಕಾರಿ ಆಸ್ಪತ್ರೆ ನಿರ್ಮಿಸಿದರೆ ಜನರಿಗೆ ಅನುಕೂಲವಾಗುತ್ತದೆ. ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಗೊಂಡಿದೆ. ಎಪಿಎಂಸಿ ಪ್ರಾಂಗಣಕ್ಕೆ ರೈತರು ಬರುವಂತಾಗಲು ಶುಚಿತ್ವ ಕಾಪಾಡುವುದೂ ಮುಖ್ಯ ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಮಾತನಾಡಿ, ಎಪಿಎಂಸಿ ಹರಾಜುಕಟ್ಟೆ ಕಟ್ಟಡಗಳಲ್ಲದೆ, ಮಾಣಿಗೆ ಪ್ರಾಥಮಿಕ ಆರೋಗ್ಯ ಕೇಂದ್ರವೂ ಶೀಘ್ರ ಒದಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಎಪಿಎಂಸಿ ಕೈಗೊಂಡ ಯೋಜನೆಗಳು ಮತ್ತು ಭವಿಷ್ಯದಲ್ಲಿ ಮೇಲ್ಕಾರ್ ನಲ್ಲಿ ಯಾರ್ಡ್ ನಿರ್ಮಿಸುವ ವಿಚಾರವನ್ನು ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ರವೀಂದ್ರ ಕಂಬಳಿ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ,  ತಾಪಂ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಗ್ರಾಪಂ ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಎಪಿಎಂಸಿ ಸದಸ್ಯ ನೇಮಿರಾಜ ರೈ,  ಪದ್ಮರಾಜ ಬಲ್ಲಾಳ್, ಭಾರತಿ ಎಸ್. ರೈ, ದಿವಾಕರ ಪಂಬದಬೆಟ್ಟು, ಹರಿಶ್ಚಂದ್ರ ಪೂಜಾರಿ, ಬಿ.ಚಂದ್ರಶೇಖರ ರೈ, ಗೀತಾಲತಾ ಟಿ.ಶೆಟ್ಟಿ, ಜಗದೀಶ ಡಿ, ನೇಮಿರಾಜ ರೈ, ವಿಠಲ ಸಾಲ್ಯಾನ್, ಬಾಲಕೃಷ್ಣ ಆಳ್ವ, ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಕೇಶವ ಗೌಡ ಇದ್ದರು. ಇದೇ ವೇಳೆ ಗ್ರಾಪಂಗಳಿಗೆ ಕಟ್ಟಡ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಎಪಿಎಂಸಿ ಕಾರ್ಯದರ್ಶಿ ಭಾರತಿ ಪಿ.ಎಸ್. ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾಣಿ, ಮಣಿನಾಲ್ಕೂರಲ್ಲಿ ಎಪಿಎಂಸಿ ಮುಚ್ಚು ಹರಾಜುಕಟ್ಟೆ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*