ಮಂಗಳೂರು ಮತ್ತು ಬಂಟ್ವಾಳ ತಾಲೂಕು ಸಂಪರ್ಕಿಸುವ ಎಡಪದವು, ಕುಪ್ಪೆಪದವು, ಆರ್ಲ, ಸೊರ್ನಾಡು ಜಿಲ್ಲಾ ಮುಖ್ಯರಸ್ತೆಯ ಮೂಲರಪಟ್ಣ ಸೇತುವೆ ನಿರ್ಮಾಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್ಕ್ ಮಾಡಿದ ಮನವಿಗೆ, ಪಿಡಬ್ಲ್ಯುಡಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಸ್ಪಂದಿಸಿದ್ದು, ಕೂಡಲೇ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ.
ಸೇತುವೆ ಕುಸಿದು 13 ತಿಂಗಳು ಕಳೆದಿದ್ದು, ಸಾರ್ವಜನಿಕರು ಪರ್ಯಾವ ವ್ಯವಸ್ಥೆ ಇಲ್ಲದೆ ತೊಂದೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು 14.35 ಲಕ್ಷ ರೂಗಳ ಮೊತ್ತದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಪ್ರಸ್ತಾವನೆಗಾಗಿ ಸಲ್ಲಿಸಿದ್ದು, ಕಾಮಗಾರಿಯನ್ನು 2019-20ನೇ ಸಾಲಿನ ಲೆಕ್ಕ ಶೀರ್ಷಿಕೆಯಡಿ ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಈ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವುದು ಅವಶ್ಯಕವಾಗಿರುವುದರಿಂದ ವಿಶೇಷ ಪ್ರಕರಣವೆಂದು ಭಾವಿಸಿ ಕಾಮಗಾರಿಗೆ ಅನುಮೋದನೆ ನೀಡಿ ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಗುರುವಾರ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಈ ಸಂದರ್ಭ ಪುರಸಭೆ ಹಿರಿಯ ಸದಸ್ಯ ಅರಳ ಗೋವಿಂದ ಪ್ರಭು, ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಉದಯಕುಮಾರ ರಾವ್ ಇದ್ದರು.