ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಸುದರ್ಶನ್ ಜೈನ್ ಅಧ್ಯಕ್ಷರಾಗಿ ಆಯ್ಕೆ

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಹಿರಿಯ ಸಾಹಿತಿ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಹಾಗೂ ಸಾಮಾಜಿಕ ,ಧಾರ್ಮಿಕ ಮುಖಂಡ ಸುದರ್ಶನ್ ಜೈನ್ ಆಯ್ಕೆಯಾಗಿರುತ್ತಾರೆ.

ಸುದರ್ಶನ್ ಜೈನ್‌ರವರು ತುಳು ಕೂಟ ಬಂಟ್ವಾಳದ ಅಧ್ಯಕ್ಷರಾಗಿ, ಜೈನ್ ಮಿಲನ್ ವಲಯ ಎಂಟರ ಮಂಗಳೂರು ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ಜರಗಿದ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಮೋಹನ್ ರಾವ್, ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಕೋಶಾಧಿಕಾರಿ ಎಸ್.ಗಂಗಾಧರ ಭಟ್ ಕೊಳಕೆ ಮತ್ತು ಸರ್ವಸದಸ್ಯರು ಅಭಿನಂದನೆ ಸಲ್ಲಿಸಿದರು.

ನೀರ್ಪಾಜೆ ಭೀಮ ಭಟ್ಟರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯಪರಿಷತ್ತಿನ ಅಧ್ಯಕರಾಗಿದ್ದರು. ಅವರು  ಸಾಹಿತಿಯಾಗಿ, ಪತ್ರಕರ್ತರಾಗಿ, ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ದುಡಿದಿದ್ದರು.  ಬಿ.ಸಿ.ರೋಡಿನಲ್ಲಿ ಕನ್ನಡ ಭವನ ನಿರ್ಮಾಣದ ಕನಸು ಕಂಡಿದ್ದರು. ಅದಕ್ಕಾಗಿ ಸ್ಥಳವನ್ನು ಗುರುತಿಸಿ ಶಂಕು ಸ್ಥಾಪನೆಯನ್ನು ನೆರವೇರಿಸಿದ್ದರು. ಇದೀಗ ಕನ್ನಡ ಭವನವು ನಿರ್ಮಾಣದ ಹಂತದಲ್ಲಿದೆ. ನೀರ್ಪಾಜೆ ಅಭಿಮಾನಿ ಬಳಗದ ಮೂಲಕ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರಧಾನವನ್ನು ಮಾಡಲಾಗುತ್ತಿದೆ. ತಾಲೂಕಿನಲ್ಲಿ ದತ್ತಿ ಉಪನ್ಯಾಸಗಳುಸೇರಿದಂತೆ ವಿವಿಧ ಸಾಹಿತ್ಯ  ಚಟುವಟಿಕೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.

www.bantwalnews.com Editor: Harish Mambady

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಸುದರ್ಶನ್ ಜೈನ್ ಅಧ್ಯಕ್ಷರಾಗಿ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*