ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಗ್ಯಾಸ್ ಟ್ಯಾಂಕರ್ ಚರಂಡಿಗೆ ಬಿದ್ದ ಘಟನೆ ಸೋಮವಾರ ರಾತ್ರಿ ನಡೆದಿದೆ. ಖಾಲಿ ಟ್ಯಾಂಕರ್ ಆಗಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಅನಿಲ ಟ್ಯಾಂಕರ್ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬಸ್ಸನ್ನು ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಹೆದ್ದಾರಿ ಬದಿಯ ಕಮರಿಗೆ ಮಗುಚಿದ ಬಿದ್ದಿದೆ. ಚಾಲಕ ತಮಿಳುನಾಡು ನಿವಾಸಿ ರಾಜ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…