ಕೇಂದ್ರ ಸರಕಾರ ಸಂವಿಧಾನದ 370ನೇ ಮತ್ತು 35 ಎ ವಿಧಿಯನ್ನು ರದ್ದುಗೊಳಿಸಿದ ನಿರ್ಧಾರಕ್ಕೆ ಸಾರ್ವತ್ರಿಕ ಮೆಚ್ಚುಗೆ ದೊರಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳವಾರ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಬಂಟ್ವಾಳ ಬಿಜೆಪಿ ಆಯೋಜಿಸಿದ್ದ ಸಂವಿಧಾನದ 370ನೇ ವಿಧಿ ರದ್ಧತಿ ಕುರಿತು ರಾಷ್ಟ್ರೀಯ ಏಕತಾ ಅಭಿಯಾನದ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.
ಚೆನ್ನವೀರ ಕಣವಿ, ಷಡಕ್ಷರಿ ಸುಧಾಮೂರ್ತಿ ಮೊದಲಾವರನ್ನು ತಾನು ಭೇಟಿಯಾದಾಗ ಕಾಶ್ಮೀರದ ನವನಿರ್ಮಾಣದ ಕುರಿತು ಕೈಗೊಂಡ ಕೇಂದ್ರ ನಿರ್ಧಾರ ಕುರಿತು ಗೌರವದ ಮಾತುಗಳನ್ನಾಡಿದ್ದಾರೆ ಎಂದರು.
ನಿವೃತ್ತ ಸೇನಾನಿ ರಾಮಯ್ಯ ಶೆಟ್ಟಿ ಸಂಪಿಲ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಕಾಶ್ಮೀರ ವಿಚಾರದಲ್ಲೇ ಜನ್ಮತಾಳಿದ ಬಿಜೆಪಿ ಪಕ್ಷವು ಈಗ ತನ್ನ ಉದ್ದೇಶವನ್ನು ಈಡೇರಿಸಿದೆ ಎಂದರು.
ರಾಷ್ಟ್ರೀಯ ಏಕತಾ ಅಭಿಯಾನದ ಸಂಚಾಲಕ ಸತೀಶ್ ಕುಂಪಲ, ಸಹಸಂಚಾಲಕಿ ಪೂಜಾ ಪೈ ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಬಂಟ್ವಾಳಕ್ಕೆ ಮೊದಲ ಬಾರಿಗೆ ಆಗಮಿಸಿದ ಸಚಿವರನ್ನು ಗೌರವಿಸಲಾಯಿತು. ಈ ಸಂದರ್ಭ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಸುಲೋಚನಾ ಜಿ.ಕೆ.ಭಟ್ ಜತೆಗಿದ್ದರು. ಕಾಶ್ಮೀರ ರದ್ಧತಿಯ ವಿಚಾರದಲ್ಲಿ ಬಂದ ಪ್ರಶಂಸತಾ ಪತ್ರವನ್ನು ಲಕ್ಷ್ಮೀನಾರಾಯಣ್ ಅವರಿಗೆ ನೀಡಲಾಯಿತು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ ವಂದಿಸಿದರು. ಮತ್ತೋರ್ವ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮ ಬಳಿಕ 370ನೇ ವಿಧಿ ರದ್ಧತಿಯ ವಿಚಾರವಾಗಿ ಸಚಿವರು ಮನೆ ಭೇಟಿ ಕಾರ್ಯಕ್ರಮ ನಡೆಸಿದರು. ಬಿ.ಸಿ.ರೋಡಿನ ಗುರುದತ್ತ್ ಶೆಣೈ ಪಾಂಡುರಂಗ ಶೆಣೈ ಹಾಗೂ ಬಂಟ್ವಾಳ ಕೆಳಗಿನಪೇಟೆಯ ಖಲೀಲುಲ್ಲಾ ಮನೆಗೆ ಭೇಟಿ ನೀಡಿ, 370ನೇ ವಿಧಿ ರದ್ಧತಿ ಕುರಿತು ಮಾತನಾಡಿದರು.
Be the first to comment on "370ನೇ ವಿಧಿ ರದ್ಧತಿಗೆ ಎಲ್ಲೆಡೆ ಮೆಚ್ಚುಗೆಯ ಮಾತು: ಸಚಿವ ಕೋಟ ಶ್ರೀನಿವಾಸ ಪೂಜಾರಿ"