ಬಂಟ್ವಾಳ ನೂತನ ವಲಯ ಅರಣ್ಯ ಕಚೇರಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಉದ್ಘಾಟಿಸಿದರು.
ಬಂಟ್ವಾಳ ಕಳ್ಳಿಮಾರ್ ನಲ್ಲಿ ಅರಣ್ಯ ಇಲಾಖೆಯ ಕಚೇರಿ ಹಿಂದೆ ಕಾರ್ಯಾಚರಿಸುತ್ತಿತ್ತು. ಇದೀಗ ಅದೇ ಜಾಗದಲ್ಲಿ ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ. ಉದ್ಘಾಟನೆ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅರಣ್ಯ ಇಲಾಖೆಯಿಂದ ಸಸ್ಯ ಸಂವರ್ಧನೆಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮರಗಳ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತುಂಗಪ್ಪ ಬಂಗೇರ, ಮಂಜುಳಾ ಮಾವೆ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ರವೀಂದ್ರ ಕಂಬಳಿ, ತಾಪಂ ಸದಸ್ಯರಾದ ಪ್ರಭಾಕರ ಪ್ರಭು, ಗಣೇಶ ಸುವರ್ಣ, ಗೀತಾ ಚಂದ್ರಶೇಖರ್, ಸಂಜೀವ ಪೂಜಾರಿ, ನಾರಾಯಣ ಶೆಟ್ಟಿ, ಅರಣ್ಯ ಇಲಾಖೆಯ ಸಿಸಿಎಫ್ ಪ್ರಕಾಶ್ ಎಸ್. ನಾಟಲ್ಕಾರ್, ಡಿಎಫ್ ಒ ಗಳಾದ ಡಾ. ಕರಿಕಾಲನ್, ಕಮಲಾ ಕರಿಕಾಲನ್, ವನ್ಯಜೀವಿ ವಿಭಾಗದ ಡಿಎಫ್ ಒ ಡಾ. ರುತ್ರೇನ್ ಪಿ, ಎಸಿಎಫ್ ಗಳಾದ ಶಂಕರೇಗೌಡ, ಸುಬ್ರಹ್ಮಣ್ಯ ರಾವ್, ಆಸ್ಟಿನ್ ಸೋನ್ಸ್, ಆರ್.ಎಫ್.ಒ ಬಿ.ಸುರೇಶ್, ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ಪುರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.