ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಶಿಶು ಅಬಿವೃಧ್ದಿ ಯೋಜನೆ ವಿಟ್ಲ ಮಂಚಿ ವಲಯ, ಗ್ರಾಮ ಪಂಚಾಯತ್ ಇರಾ ಪ್ರಾಥಮಿಕ ಆರೋಗ್ಯ ಕೇಂದ್ರಮಂಚಿ, ಸ್ತ್ರೀಶಕ್ತಿ ಗೊಂಚಲು ಇವರ ಸಂಯುಕ್ತ ಆಶ್ರಯದಲ್ಲಿ ಇರಾ ಮಲೆಯಾಲಿ ಬಿಲ್ಲವ ಸಂಘದ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ, ಹೆಣ್ಣು ಮಕ್ಕಳ ಶಿಶು ಪ್ರದರ್ಶನ, ಮಹಿಳಾ ಗ್ರಾಮ ಸಭೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ ಉದ್ಘಾಟಿಸಿದರು. ತಮ್ಮ ಮಕ್ಕಳನ್ನು ಉತ್ತಮ ರೀತೀಯಲ್ಲಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಶ್ಲಾಘಾನೀಯೆಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ಮಾತನಾಡಿ ಸ್ಥಳೀಯವಾಗಿ ಸಿಗುವಂತಹ ಆಹಾರ ಪದಾರ್ಥಗಳಿಂದ ಅತೀ ಹೆಚ್ಚಿನ ಪೋಷಕಾಂಶಗಳನ್ನು ಪಡೆಯಬಹುದು. ಪ್ರಕೃತಿ ನಮಗೆ ಆಹಾರ ನೀಡುತ್ತಿದೆ ಆದರೆ ನಾವು ಸರಯಾಗಿ ಬಳಸಿಕೊಳ್ಳಬೇಕು ಎಂದರು.
ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಮಾತನಾಡಿದರು. ಬಂಟ್ವಾಳ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳಾದ ಗಾಯತ್ರಿ ಕಂಬಳಿ ದಿನ ನಿತ್ಯದ ಬಳಕೆಯ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ವಿಟ್ಲ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳಾದ ಸುಧಾ ಜೋಷಿ ಪೋಷಣ್ ಅಭಿಯಾನ ಮಾಸಾಚರಣೆ ಬಗ್ಗೆ, ವಿಶ್ವ ಪೌಷ್ಟಿಕ ಆಹಾರ ಸಪ್ತಾಹದ ಉಧ್ಧೇಶ ಬಗ್ಗೆ, ಶಿಶು ಪ್ರರ್ಶನದ ಮಹತ್ವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಆರೋಗ್ಯ ಸಹಾಯಕಿ ರಾಧ ಗರ್ಭಿಣಿಯರ ಆರೈಕೆ, ಎದೆ ಹಾಲಿನ ಮಹತ್ವ, ರಾಷ್ಟ್ರೀಯ ಜಂತು ಹುಳ ನಿವಾರಣಾ ದಿನಾಚರಣೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು . ಅಂಗನವಾಡಿ ಮೇಲ್ವಿಚಾರಕಿ ಗುಣವತಿ ಸ್ವಾಗತಿಸಿದರು. ಇರಾ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸುಶೀಲಾ ವಂದಿಸಿದರು. ಇರಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಳಿನಿ, ಸದಸ್ಯರಾದ ಮೊಯಿದು ಕುಂಞಿ, ರಮೇಶ್, ಹಿರಿಯರಾದ ವಾಮನ ಪೂಜಾರಿ ಮತ್ತಿತರರು ಇದ್ದರು.