ಬಂಟ್ವಾಳ

ಗಾಂಧೀಜಿ 150: ಕಾಲ್ನಡಿಗೆ ಜಾಥಾ ಪೂರ್ವಭಾವಿ ಸಭೆ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಸಮವಸ್ತ್ರ ಧರಿಸಿ, ಮಧ್ಯಾಹ್ನ 2 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಜಮಾವಣೆಗೊಂಡು ಅಲ್ಲಿಂದ ಜಾಥಾ ಮನಪಾ, ಪಿವಿಎಸ್ ವೃತ್ತ, ಬಂಟ್ಸ್ ಹಾಸ್ಟೆಲ್, ಜ್ಯೋತಿ ವೃತ್ತದಿಂದ ಹಂಪನ್‌ಕಟ್ಟೆಯಾಗಿ ಪುರಭವನದ ಹೊರಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ರೈ ಮಾಹಿತಿ ನೀಡಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಥವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು.

ಈ ಸಂದರ್ಭ ಡಿಸಿಸಿ ಅಧ್ಯಕ್ಷ, ವಿಧಾನಪರಿಷತ್ತು ಸದಸ್ಯ ಹರೀಶ್ ಕುಮಾರ್, ಮುಖಂಡರಾದ ವೆಂಕಪ್ಪ ಗೌಡ ಸುಳ್ಯ, ಪೃಥ್ವಿರಾಜ್ ಗುರುಪುರ, ರಮಾನಾಥ ವಿಟ, ಜಿಲ್ಲಾ ಪಂಚಾಯತ್ ಸದ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್.ಎಸ್ ಮಹಮ್ಮದ್, ಮಂಜುಳ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಎ.ಪಿ.ಎಮ್.ಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ಇದಿನಬ್ಬ ಕಲ್ಲಡ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಮಲ್ಲಿಕಾ ವಿ ಶೆಟ್ಟಿ ತಾಲೂಕು ಪಂಚಾಯತ್ ಸದಸ್ಯರು, ಪುರಸಭಾ ಸದಸ್ಯರು, ವಲಯ ಅಧ್ಯಕ್ಷರು ಬೂತ್ ಸಮಿತಿ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಯುವ ಕಾಂಗ್ರೆಸ್ ಎನ್.ಎಸ್.ಯು.ಐ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts