ಬಳ್ಳಾರಿ ಜಿಲ್ಲಾ ಹಗರಿಬೊಮ್ಮನಹಳ್ಳಿ ಮತ್ತು ಹಡಗಲಿ ತಾಲೂಕಿನ ಶಾಲಾ ಉಸ್ತುವಾರಿ ಅಧಿಕಾರಿಗಳ ತಂಡ ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಯೋಗದಲ್ಲಿ ಶೈಕ್ಷಣಿಕ ಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಶಾಲೆಗೆ ಭೇಟಿ ನೀಡಿದರು.
ಶಾಲಾ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಶಾಲಾ ಶೈಕ್ಷಣಿಕ ಹಾಗೂ ಭೌತಿಕ ಮಾಹಿತಿಯನ್ನು ನೀಡಿದರು. ಈ ಸಂದರ್ಭ ತಮ್ಮ ಶಾಲಾ ಭೇಟಿಯ ಸವಿನೆನಪಿಗಾಗಿ ಶಾಲೆಯ ಔಷಧಿವನದಲ್ಲಿ ಔಷಧಿ ಗಿಡವನ್ನು ನೆಟ್ಟು ಶಾಲೆಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು . ಬಂಟ್ವಾಳ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಧಾಕೃಷ್ಣ ಭಟ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಿನ್ನ ಮೈರಾ ,ಹಾಗೂ ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…