ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಮಂಚಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಉದ್ಘಾಟಿಸಿದರು. 

ಜಾಹೀರಾತು

ಸಭಾ ಕಾರ್ಯಕ್ರಮಗಳು ಇಲ್ಲದ ಕಾರಣ, ಎರಡು ಪ್ರಮುಖ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು, ಕಾರ್ಯಕರ್ತರು ಅಲ್ಲಿದ್ದ ಸಣ್ಣ ಜಾಗದಲ್ಲಿ ಜಮಾಯಿಸಿದ್ದರು. ಜನಪ್ರತಿನಿಧಿಗಳು, ರಾಜಕೀಯ ಪ್ರಮುಖರು, ಅವರೊಂದಿಗೆ ಬಂದಿದ್ದ  ಕಾರ್ಯಕರ್ತರು ಹೀಗೆ ಎಲ್ಲರೂ ಆಸ್ಪತ್ರೆ ಪ್ರವೇಶಿಸಿ, ಸ್ವಲ್ಪ ಹೊತ್ತು ಅಲ್ಲಿದ್ದು, ವೀಕ್ಷಿಸಿ ಮರಳಿದರು. ಹೀಗೆ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮವು ಅರ್ಧ ಗಂಟೆಯಲ್ಲೇ ಸಂಪನ್ನಗೊಂಡಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ. ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್,  ಮಮತಾ ಡಿ.ಎಸ್. ಗಟ್ಟಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ,  ಸ್ಥಳೀಯ ತಾಪಂ ಸದಸ್ಯ ನಾರಾಯಣ ಶೆಟ್ಟಿ, ಇರಾ ಗ್ರಾ.ಪಂ‌  ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ , ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ  ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ, ತಹಶೀಲ್ದಾರ್ ರಶ್ಮಿ ಎಸ್.ಆರ್. ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*