ಮಂಚಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮಗಳು ಇಲ್ಲದ ಕಾರಣ, ಎರಡು ಪ್ರಮುಖ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು, ಕಾರ್ಯಕರ್ತರು ಅಲ್ಲಿದ್ದ ಸಣ್ಣ ಜಾಗದಲ್ಲಿ ಜಮಾಯಿಸಿದ್ದರು. ಜನಪ್ರತಿನಿಧಿಗಳು, ರಾಜಕೀಯ ಪ್ರಮುಖರು, ಅವರೊಂದಿಗೆ ಬಂದಿದ್ದ ಕಾರ್ಯಕರ್ತರು ಹೀಗೆ ಎಲ್ಲರೂ ಆಸ್ಪತ್ರೆ ಪ್ರವೇಶಿಸಿ, ಸ್ವಲ್ಪ ಹೊತ್ತು ಅಲ್ಲಿದ್ದು, ವೀಕ್ಷಿಸಿ ಮರಳಿದರು. ಹೀಗೆ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮವು ಅರ್ಧ ಗಂಟೆಯಲ್ಲೇ ಸಂಪನ್ನಗೊಂಡಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ. ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ಮಮತಾ ಡಿ.ಎಸ್. ಗಟ್ಟಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಸ್ಥಳೀಯ ತಾಪಂ ಸದಸ್ಯ ನಾರಾಯಣ ಶೆಟ್ಟಿ, ಇರಾ ಗ್ರಾ.ಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ , ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ, ತಹಶೀಲ್ದಾರ್ ರಶ್ಮಿ ಎಸ್.ಆರ್. ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮೊದಲಾದವರು ಉಪಸ್ಥಿತರಿದ್ದರು.