ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬಂಟ್ವಾಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಬಂಟ್ವಾಳ ವತಿಯಿಂದ ೧೫೧ನೇ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ವ್ಯಸನಮುಕ್ತರ ಸಮಾವೇಶ ಬಂಟ್ವಾಳದಲ್ಲಿ ನಡೆಯಿತು.
ಆರಂಭದಲ್ಲಿ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಮುಂಭಾಗದಿಂದ ಹೊರಟ ಜಾಥಾವನ್ನು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಎ.ಸಿ.ಭಂಡಾರಿ ಉದ್ಘಾಟಿಸಿದರು. ಬಳಿಕ ನಡೆದ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು.
ರಾಜ್ಯೋತ್ಸವ ಪ್ರಶಸ್ತಿ ಪಡೆದ ಜನಜಾಗೃತಿ ವೇದಿಕೆಯ ಸದಸ್ಯ ಫರಂಗಿಪೇಟೆ ಸೇವಾಂಜಲಿ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಅವರನ್ನು ಸನ್ಮಾನಿಸಲಾಯಿತು. ಕೃಷ್ಣಆಚಾರ್ಯ ಅವರು ವೈಷ್ಣವ ಜನತೋ ಹಾಡು ಹಾಡಿದರು. ಬಂಟ್ವಾಳ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ವಲಯ ಪ್ರಧಾನ ಧರ್ಮಗುರು ಫಾ| ವಲೇರಿಯನ್ ಡಿಸೋಜಾ, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಜಿ.ಪಂ.ಸದಸ್ಯರಾದ ಬಿ.ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್, ಕಿರಣ್ ಹೆಗ್ಡೆ, ಕೇಂದ್ರ ಸಮಿತಿ ಒಕ್ಕೂಟ ಅಧ್ಯಕ್ಷ ಮಾಧವ ವಳವೂರು, ಪ್ರಮುಖರಾದ ರೊನಾಲ್ಡ್ ಡಿಸೋಜ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಬಂಟ್ವಾಳ ವರ್ತಕರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ವಿವಿಧ ವಲಯಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ್ ಪಿ. ಸ್ವಾಗತಿಸಿದರು. ರಾಮ್‌ಕುಮಾರ್ ನಿರ್ವಹಿಸಿದರು. ವಿಟ್ಲ ಯೋಜನಾಧಿಕಾರಿ ಮೋಹನ್ ಕೆ, ವಂದಿಸಿದರು.
www.bantwalnews.com Editor: Harish Mambady
For Advertisements Contact: 9448548127
Be the first to comment on "ಬಂಟ್ವಾಳದಲ್ಲಿ ಜನಜಾಗೃತಿ ಜಾಥಾ, ವ್ಯಸನಮುಕ್ತರ ಸಮಾವೇಶ"