ತಾಲೂಕು ಕಚೇರಿಗೆ ಬರುವವರಿಗೆ ಉತ್ತಮ ಸೇವೆ ನೀಡಿದರೆ ಗಾಂಧೀಜಿ ತತ್ವ ಪಾಲಿಸಿದಂತಾಗುತ್ತದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಬಂಟ್ವಾಳ ಮಿನಿ ವಿಧಾನಸೌಧ ಆವರಣದಲ್ಲಿ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಎಲ್ಲ ಸಿಬ್ಬಂದಿ ಬುಧವಾರ ಬೆಳಗ್ಗೆಯೇ ಸ್ವಚ್ಛತಾ ಕಾರ್ಯ ನಡೆಸಿದರು. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನಡೆದ ಗಾಂಧೀಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.
ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಮಹಾತ್ಮ ಗಾಂಧೀಜಿಯವರ ವಿಚಾರಧಾರಣೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭವ್ಯ ಬಂಟ್ವಾಳವನ್ನು ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ವಿಟ್ಲ ನಾಡಕಚೇರಿ ಉಪತಹಶೀಲ್ದಾರ್ ರವಿಶಂಕರ್. ಸಿ ಎಮ್, ಪ್ರಭಾರ ಉಪ ಉಪತಹಸೀಲ್ದಾರ್ ಸೀತಾರಾಮ, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ,
ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು. ಸಾರ್ವಜನಿಕರು ಇದ್ದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ,ವಂದಿಸಿದರು.
www.bantwalnews.com Editor: Harish Mambady
For Advertisements Contact: 9448548127

Be the first to comment on "ಕಚೇರಿಗೆ ಬರುವವರಿಗೆ ಉತ್ತಮ ಸೇವೆ ನೀಡುವುದೇ ಗಾಂಧಿ ತತ್ವ ಪಾಲನೆ: ತಹಸೀಲ್ದಾರ್"