ಬಂಟ್ವಾಳ

ಕಚೇರಿಗೆ ಬರುವವರಿಗೆ ಉತ್ತಮ ಸೇವೆ ನೀಡುವುದೇ ಗಾಂಧಿ ತತ್ವ ಪಾಲನೆ: ತಹಸೀಲ್ದಾರ್

ತಾಲೂಕು ಕಚೇರಿಗೆ ಬರುವವರಿಗೆ ಉತ್ತಮ ಸೇವೆ ನೀಡಿದರೆ ಗಾಂಧೀಜಿ ತತ್ವ ಪಾಲಿಸಿದಂತಾಗುತ್ತದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಬಂಟ್ವಾಳ ಮಿನಿ ವಿಧಾನಸೌಧ ಆವರಣದಲ್ಲಿ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಎಲ್ಲ ಸಿಬ್ಬಂದಿ ಬುಧವಾರ ಬೆಳಗ್ಗೆಯೇ ಸ್ವಚ್ಛತಾ ಕಾರ್ಯ ನಡೆಸಿದರು. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನಡೆದ ಗಾಂಧೀಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

ಜಾಹೀರಾತು

ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಮಹಾತ್ಮ ಗಾಂಧೀಜಿಯವರ ವಿಚಾರಧಾರಣೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭವ್ಯ ಬಂಟ್ವಾಳವನ್ನು ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ವಿಟ್ಲ ನಾಡಕಚೇರಿ ಉಪತಹಶೀಲ್ದಾರ್ ರವಿಶಂಕರ್. ಸಿ ಎಮ್, ಪ್ರಭಾರ ಉಪ ಉಪತಹಸೀಲ್ದಾರ್ ಸೀತಾರಾಮ, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ,

ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು. ಸಾರ್ವಜನಿಕರು ಇದ್ದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ  ಸ್ವಾಗತಿಸಿ,ವಂದಿಸಿದರು.

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.