ವಿಟ್ಲ

ಒಡಿಯೂರಿನಲ್ಲಿ ಹನುಮಗಂಗಾ ಪುಷ್ಕರಿಣಿ ಸಮರ್ಪಣೆ, ಸನ್ಮಾನ ಕಾರ್ಯಕ್ರಮ

ಒಡಿಯೂರು ಸಂಸ್ಥಾನದಲ್ಲಿ ನಡೆದ ಶ್ರೀ ಲಲಿತ ಪಂಚಮಿ ಮಹೋತ್ಸವ, ಶ್ರೀ ಚಂಡಿಕಾಯಾಗ, ಶ್ರೀ ಹನುಮಗಂಗಾ ಪುಷ್ಕರಿಣಿ ಸಮರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು.

ಜಾಹೀರಾತು

ಸಮಾಜದ ಋಣ ಸಂತನಿಗೂ ಇದ್ದು, ಅದು ಸಂತರ ಕರ್ತವ್ಯವೂ ಆಗಿದೆ ಎಂದು ಈ ಸಂದರ್ಭ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿದ್ದರು.

ವಿದುಷಿ ಸಾವಿತ್ರಿ ಈಶ್ವರ ಭಟ್ ಅಮೈ, ಚಿತ್ರನಟ, ರಂಗಭೂಮಿ ಕಲಾವಿದ ಕಾಸರಗೋಡು ಚಿನ್ನಾ, ತುಳು ನಾಟಕ ರಚನೆಗಾರ, ನಿರ್ದೇಶಕ, ನಿರ್ಮಾಪಕ ಕೃಷ್ಣ ಜಿ. ಮಂಜೇಶ್ವರ, ಚಿತ್ರಕಲಾ ಶಿಕ್ಷಕ ತಾರಾನಾಥ ಕೈರಂಗಳ, ಅಬ್ಬಕ್ಕ ಟಿ.ವಿ.ಯ ಆಡಳಿತ ನಿರ್ದೇಶಕ ಶಶಿಧರ ಪೊಯ್ಯತ್ತಬೈಲ್, ಯಕ್ಷಗಾನ ಹಾಸ್ಯ ಕಲಾವಿದ ಸೀತಾರಾಮಕುಮಾರ್ ಕಟೀಲುರವರಿಗೆ ಸ್ವಾಮೀಜಿಯವರು ಗುರುದೇವಾನುಗ್ರಹ ಪುರಸ್ಕಾರ ನೀಡಿ ಗೌರವಿಸಿದರು.

ಶ್ರೀ ಹನುಮಗಂಗಾ ಪುಷ್ಕರಣಿಯ ಪ್ರಾಯೋಜಕರಾದ ಮುಂಬೈನ ಉದ್ಯಮಿ ವಾಮಯ್ಯ ಬಿ. ಶೆಟ್ಟಿ, ರೇವತಿ ವಾಮಯ್ಯ ಶೆಟ್ಟಿ ದಂಪತಿಗಳನ್ನು, ತಾಂತ್ರಿಕ ನಿರ್ವಹಣೆ ಮಾಡಿದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಶೋಕ್ ಕುಮಾರ್ ಎ. ರವರನ್ನು ಸ್ವಾಮೀಜಿಯವರು ಗೌರವಿಸಿದರು. ಬೆಳಿಗ್ಗೆ ಒಡಿಯೂರು ಶ್ರೀಗಳವರ ದಿವ್ಯ ಕಲ್ಪನಾಶಕ್ತಿಯ ಅನಾವರಣವಾಗಿ ಶ್ರೀ ಸಂಸ್ಥಾನದಲ್ಲಿ ನಿರ್ಮಾಣಗೊಂಡ ’ಶ್ರೀಹನುಮಗಂಗಾ ಪುಷ್ಕರಿಣಿ ಲೋಕಾರ್ಪಣೆಗೊಳಿಸಲಾಯಿತು. ಮಧ್ಯಾಹ್ನ ಶ್ರೀ ಚಂಡಿಕಾ ಮಹಾಯಾಗದ ಪುರ್ಣಾಹುತಿ, ಮಹಾಪೂಜೆ, ಮಹಾಸಂತರ್ಪಣೆ, ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ’ಚಂದ್ರಾವಳಿ ವಿಲಾಸ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ಚಿಕ್ಕಮಗಳೂರು ಬಸವನಹಳ್ಳಿ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ನಂದಿನಿ ಶೆಟ್ಟಿ, ಮುಂಬೈನ ಉದ್ಯಮಿ ವಾಮಯ್ಯ ಬಿ. ಶೆಟ್ಟಿ, ರೇವತಿ ವಾಮಯ್ಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಯೀಶ್ವರಿ ಪಟ್ಲ, ಒಡಿಯೂರು ಶ್ರೀ ವಿ.ಸೌ.ಸ.ನಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕರಾದ ನಿತ್ಯಾನಂದ ಶೆಟ್ಟಿ ಮನವಳಿಕೆ, ಒಡಿಯೂರು ಜೈ ಗುರುದೇವಾ ಕಲಾಕೇಂದ್ರದ ಅಧ್ಯಕ್ಷರಾದ ಸುಬ್ರಹ್ಮಣ್ಯ ಟಿ., ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಬಂಟ್ವಾಳ ತಾ. ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಒಡಿಯೂರು ಶ್ರೀ ಗುರುದೇವ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ್ ಶೆಟ್ಟಿ, ಒಡಿಯೂರು ಶ್ರೀ ಗುರುದೇವ ಪ್ರೌಢಶಾಲಾ ಶಿಕ್ಷಕಿ ಸವಿತಾರವರು ಶ್ರೀ ಗುರುದೇವಾನುಗ್ರಹ ಪುರಸ್ಕೃತರ ಪರಿಚಯ ಓದಿದರು. ಪ್ರಮೀಳ ಬಾಕ್ರಬೈಲ್ ಹಾಗೂ ಶೋಭಾ ಬಾಕ್ರಬೈಲ್ ರವರಿಗೆ ನೆರೆ ಪರಿಹಾರ ವಿತರಿಸಲಾಯಿತು.ರೇಣುಕಾ ಎಸ್ ಶೆಟ್ಟಿ ಪ್ರಾರ್ಥಿಸಿ, ಯಶವಂತ ವಿಟ್ಲ ಸ್ವಾಗತಿಸಿದರು. ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕರಾದ ಗಣಪತಿ ಭಟ್ ಸೇರಾಜೆ ವಂದಿಸಿದರು.

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.