ಗಾಂಧೀಜಿ ಸರಳತೆಯ ಪ್ರತೀಕವಾಗಿದ್ದರು, ನಾಯಕತ್ವ ಗುಣ, ಅಹಿಂಸಾ ಸಿದ್ಧಾಂತದ ಪ್ರತಿಪಾದನೆಯಿಂದ ವಿಶ್ವ ಪ್ರಸಿದ್ಧರಾದರು ಎಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ ಸಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಮಹಮ್ಮದ್ ಇಮ್ತಿಯಾಜ್ ಅಹಮದ್ ಹೇಳಿದರು.
ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬಂಟ್ವಾಳ ಆಶ್ರಯದಲ್ಲಿ 150ನೇ ಗಾಂಧಿ ಜಯಂತಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ಹಾಗು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ರಮ್ಯ ಎಚ್.ಆರ್. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ಶಿಲ್ಪಾ ಜಿ. ತಿಮ್ಮಾಪುರ ಶುಭ ಹಾರೈಸಿದರು. ಬೊಂಡಾಲ ಜಗನ್ನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕು ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ ಜೈನ್, ಮಾಜಿ ಅಧ್ಯಕ್ಷ ಶ್ರೀಧರ ಪೈ, ಶಿಕ್ಷಕರಾದ ಸುಜಾತ, ಸದಾಶಿವ ನಾಯಕ್, ವಸಂತಿ, ಪ್ರಕಾಶ್, ಹರೀಶ್, ವರಮಹಾಲಕ್ಷ್ಮೀ, ಶಾಲಾ ವಿದ್ಯಾರ್ಥಿ ನಾಯಕ ರಿತೇಶ್ ಪೋಷಕರು ಉಪಸ್ಥಿತರಿದ್ದರು. ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ನ್ಯಾಯಾಧೀಶರು ಬಹುಮಾನ ವಿತರಿಸಿದರು.
ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ ವಕೀಲರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ರಾವ್ ಪುಂಚಮೆ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು
www.bantwalnews.com Editor: Harish Mambady For Advertisements Contact: 9448548127
Be the first to comment on "ಅಹಿಂಸಾ ಸಿದ್ಧಾಂತ ಪ್ರತಿಪಾದನೆಯಿಂದ ಪ್ರಸಿದ್ಧರಾದರು ಗಾಂಧೀಜಿ: ನ್ಯಾಯಾಧೀಶ"