ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಗ್ರಾಮಮಟ್ಟದಲ್ಲಿ ನಡೆದರಷ್ಟೇ ಗ್ರಾಮೀಣ ಪ್ರದೇಶಗಳಲ್ಲಿ ವಾಲ್ಮೀಕಿ ಸಂದೇಶ ರವಾನೆಯಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಯು. ಹೇಳಿದರು.
www.bantwalnews.com Editor: Harish Mambady For Advertisements Contact: 9448548127
ಭಾನುವಾರ ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್‌ಜಿಎಸ್‌ಆರ್‌ವೈನ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ತಾಲೂಕು ಮಟ್ಟದ ಆಚರಣೆ ಉದ್ಘಾಟಿಸಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾದ್ದು ಇಂದಿನ ಅನಿವಾರ್ಯತೆ. ಇಚ್ಛಾಶಕ್ತಿ ಇದ್ದಾಗ ವ್ಯಕ್ತಿ ಶಕ್ತಿಯಾಗಬಹುದು ಎಂಬುದನ್ನು ಜಗತ್ತಿಗೇ ತೋರಿಸಿಕೊಟ್ಟರು ಎಂದವರು ಹೇಳಿದರು . ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ನಾರಾಯಣ ಗೌಡ, ರಾಮನ ಆದರ್ಶಗಳನ್ನು ಜಗತ್ತಿಗೆ ಸಾರಿದ ಮಹರ್ಷಿ ವಾಲ್ಮೀಕಿಯ ಕುರಿತು ಅಧ್ಯಯನ ಅಗತ್ಯ ಎಂದರು.
ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯ ತುಂಗಪ್ಪ ಬಂಗೇರ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಉಪಸ್ಥಿತರಿದ್ದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿ ಮೋಹನ್ ಕುಮಾರ್ ಸ್ವಾಗತಿಸಿದರು. ಆಶ್ರಮ ಶಾಲೆಯ ಮೇಲ್ವಿಚಾರಕ ಪ್ರಸಾದ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.