ಮಜಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ

ಗ್ರಾಮೀಣ ಜನರಿಗೆ ಸ್ಥಳದಲ್ಲೇ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಕಾರ್ಯ ಶ್ಲಾಘನಾರ್ಹ ಎಂದು ಮಜಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಹೇಳಿದರು.

 

ADVT

www.bantwalnews.com Editor: Harish Mambady

ವೀರಕಂಭದ ಮಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಗಣೇಶಕೋಡಿ ಅಂಕದಡ್ಕ ವತಿಯಿಂದ ಕೆಎಂಸಿ ವತಿಯಿಂದ ಉಚಿತ ವೈದ್ಯಕೀಯ, ದಂತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿಯ ಡಾ. ಹರ್ಬಿಟ್ ಮರಿಯೋ ಪಿರೇರ ಶಿಬಿರದ ಕುರಿತು ವಿವರಿಸಿದರು. ತಾಪಂ ಸದಸ್ಯೆ ಗೀತಾ ಚಂದ್ರಶೇಖರ್, ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಮಣಿಪಾಲ ದಂತ ವೈದ್ಯಕೀಯ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಮೃಣಾಲಿನಿ ಶೆಟ್ಟಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಸಾಮಾನ್ಯ  ರೋಗ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಸ್ತ್ರೀರೋಗ ತಜ್ಞರು ,ಕಣ್ಣಿನ ತಜ್ಞರು ,ಕಿವಿ ಮೂಗು ಮತ್ತು ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಹಾಗೂ ದಂತ ಚಿಕಿತ್ಸಾ ತಜ್ಞರು ಭಾಗವಹಿಸಿದ್ದರು. ಅಗತ್ಯ ಫಲಾನುಭವಿಗಳಿಗೆ ಉಚಿತ ಕನ್ನಡಕ ಹಾಗೂ ಔಷಧಿಯನ್ನು ವಿತರಿಸಲಾಯಿತು. ಸಂಘಟಕರಾದ ಸ್ವಸ್ತಿಕ್ ಫ್ರೆಂಡ್ಸ್ ಗಣೇಶ್ಕೋಡಿ ಅಂಕದಡ್ಕ ವೀರಕಂಬ ಅಧ್ಯಕ್ಷ ಮೋಹನ್ ದಾಸ್ ಸ್ವಾಗತಿಸಿ ಕಾರ್ಯದರ್ಶಿ ವಿಘ್ನೇಶ ಆಚಾರ್ಯ ವಂದಿಸಿದರು. ರವೀಶ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.




  

  

Be the first to comment on "ಮಜಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*