Editor: Harish Mambady
ಹುಟ್ಟೂರು ಸಜೀಪಮೂಡದಲ್ಲಿ ಜಗದ್ವಿಖ್ಯಾತ ಸ್ಯಾಕ್ಸೋಫೋನ್ ವಾದಕ ಡಾ. ಕದ್ರಿ ಗೋಪಾಲನಾಥ್ ಅವರ ಅಂತಿಮ ವಿಧಿ ವಿಧಾನಗಳನ್ನು ಸಕಲ ಸರಕಾರಿ ಗೌರವಗಳೊಂದಿಗೆ ಸೋಮವಾರ ಸಂಜೆ ನೆರವೇರಿಸಲಾಯಿತು.
ವಿಡಿಯೋಗೆ ಕ್ಲಿಕ್ ಮಾಡಿರಿ:
ಈ ಸಂದರ್ಭ ಜಿಲ್ಲಾಡಳಿತದ ಪ್ರತಿನಿಧಿಯಾಗಿ ಆಗಮಿಸಿದ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಸಕಲ ಸರಕಾರಿ ಮರ್ಯಾದೆಯನ್ನು ನೀಡಲಾಯಿತು. ಪೊಲೀಸ್ ಡಿವೈಎಸ್ಪಿ ದಿನಕರ ಶೆಟ್ಟಿ ಮುಂದಾಳತ್ವದಲ್ಲಿ ಪೊಲೀಸ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್ಸ್ ಪೆಕ್ಟರ್ ನಾರಾಯಣ್ ಪೂಜಾರಿ ನೇತೃತ್ವದಲ್ಲಿ ಹೂಗುಚ್ಛ ಇರಿಸಿ, ಮೂರು ಬಾರಿ ಕುಶಾಲತೋಪು ಸಿಡಿಸಿ, ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಅದಾದ ಬಳಿಕ ಸಹೋದರರಾದ ಚಂದ್ರನಾಥ್, ರಮೇಶ್ ನಾಥ್, ಗಣೇಶ್ ನಾಥ್, ಪತ್ನಿ ಸರೋಜಿನಿ, ಪುತ್ರರಾದ ಖ್ಯಾತ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಗುರುಪ್ರಸಾದ್ ಕದ್ರಿ, ಪುತ್ರಿ ಅಂಬಿಕಾ ಮತ್ತು ಕುಟುಂಬಸ್ಥರು ಜೋಗಿ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಪಂ ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜ, ಸ್ಥಳೀಯ ಗ್ರಾಪಂ ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ನಂದಾವರ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ತಾಪಂ ಸದಸ್ಯ ಸಂಜೀವ ಪೂಜಾರಿ, ಪ್ರಮುಖರಾದ ಕೆ.ಹರಿಕೃಷ್ಣ ಬಂಟ್ವಾಳ್, ದೇವದಾಸ ಶೆಟ್ಟಿ, ಶ್ರೀಕಾಂತ ಶೆಟ್ಟಿ, ದೇವಿಪ್ರಸಾದ್ ಪೂಂಜಾ, ಸಂತೋಷ್ ಕುಮಾರ್ ರೈ ಬೋಳಿಯಾರ್, ಸೀತಾರಾಮ ಶೆಟ್ಟಿ, ಜಗದೀಶ್ ಅಧಿಕಾರಿ, ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಗಂಗಾಧರ ಭಟ್ ಕೊಳಕೆ, ಯಶವಂತ ದೇರಾಜೆ, ಜಗದೀಶ ಅಧಿಕಾರಿ, ಪಿ.ಕೆ.ಗಣೇಶ್, ಕಂದಾಯ ಇಲಾಖೆಯ ರಾಮ ಕಾಟಿಪಳ್ಳ, ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್, ಎಸ್.ಐಗಳಾದ ಚಂದ್ರಶೇಖರ್, ಸುಧಾಕರ ತೋನ್ಸೆ, ಸಹಿತ ಊರ, ಪರವೂರ ಗಣ್ಯರು, ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರು ಅಂತಿಮ ನಮನ ಸಲ್ಲಿಸಿದರು.