ಬಂಟ್ವಾಳ

ಆರ್ಥಿಕ ಬಿಕ್ಕಟ್ಟು: ಬಿ.ಸಿ.ರೋಡಿನಲ್ಲಿ ಎಡಪಕ್ಷಗಳ ಪ್ರತಿಭಟನೆ

ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಸಂಕಷ್ಟಗಳ ವಿರುದ್ಧ ಸಿಪಿಐ ಹಾಗೂ ಸಿಪಿಐಎಂ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಎಡಪಕ್ಷಗಳ ಅಖಿಲ ಭಾರತ ಪ್ರತಿಭಟನೆ ಮಂಗಳವಾರ ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ನಡೆಯಿತು.

ಜಾಹೀರಾತು

www.bantwalnews.com Editor: Harish Mambady For Advertisements Contact: 9448548127

ಡಿವೈಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ದೊಡ್ಡ ಪ್ರಮಾಣದ ಕೈಗಾರಿಕೆಯಿಂದ ಹಿಡಿದು ಸಣ್ಣಗುಡಿ ಕೈಗಾರಿಕೆಗಳು ಕೂಡಾ ಮುಚ್ಚಿ ಹೋಗುತ್ತಿವೆ ಎಂದರು.

ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ.ಶೇಖರ್ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಶನ್, ಫಾರ್ವರ್ಡ್ ಬ್ಲಾಕ್ ಹಾಗೂ ಆರ್‌ಎಸ್‌ಪಿ ಎಡಪಕ್ಷಗಳ ವತಿಯಿಂದ ದೇಶಾದ್ಯಂತ ಪ್ರತಿಭಟನಾ ಸಭೆಗಳು ನಡೆಯುತಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಪ್ರಮುಖರಾದ ಉದಯ ಕುಮಾರ್, ಸಂಜೀವ ಬಂಗೇರ, ವಾಸುಗಟ್ಟಿ, ಬಾಬು ಭಂಡಾರಿ, ಭಾರತಿ ಶಂಭೂರು, ಸರಸ್ವತಿ ಕಡೇಶಿವಾಲಯ, ಪಿ.ವಿಠಲ ಬಂಗೇರ, ಸುಧಾಕರ ಹಾಜರಿದ್ದರು. ಸಿಪಿಐ(ಎಂ) ಬಂಟ್ವಾಳ ತಾಲೂಕು ಸಮಿತಿ ಕಾರ್ಯದರ್ಶಿ ರಾಮಣ್ಣ ವಿಟ್ಲ ವಂದಿಸಿದರು. ಮುಖಂಡ ಸುರೇಶ್ ಕುಮಾರ್ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts