ಅಪಪ್ರಚಾರಕ್ಕೆ ಸೂಕ್ತ ಪ್ರತ್ಯುತ್ತರ ನೀಡಲು ಕರೆ
ವಿರೋಧ ಪಕ್ಷದವರ ಅಪಪ್ರಚಾರಕ್ಕೆ ಪ್ರತ್ಯುತ್ತರ ನೀಡಿ ಪಕ್ಷದ ಘನತೆ ಎತ್ತಿಹಿಡಿಯಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಆಚಾರಿಪಲ್ಕೆಯಲ್ಲಿ ನಡೆದ ಪಂಜಿಕಲ್ಲು ಗ್ರಾಮ ಪಂಚಾಯತ್ ವಲಯದ ಕಾಂಗ್ರೆಸ್ ಪಂಚಾಯತ್ ಮಿಲನ ಕಾಂiiಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕರ್ತರಿಂದ ಸಲಹೆ ಸೂಚನೆಗಳನ್ನು ಸ್ವೀಕರಿಸಿ ಪಕ್ಷದಲ್ಲಿ ಶಿಸ್ತಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟು ಒಗ್ಗಟ್ಟಿನಿಂದ ಪಕ್ಷದ ಬಲವರ್ಧನೆಗೆ ಒತ್ತು ನೀಡುವಂತೆ ಕರೆಯಿತ್ತರು.
ವಲಯ ಹಾಗೂ ಬೂತ್ ಸಮಿತಿಯನ್ನು ಪುನರ್‌ರಚಿಸಲಾಯಿತು. ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ಸದಾನಂದ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.
ವಲಯ ಪ್ರದಾನ ಕಾರ್ಯದರ್ಶಿಯಾಗಿ ದೇವಪ್ಪ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾಗಿ ಲೋಕಯ್ಯ ಪೂಜಾರಿ, ನೇಮಿರಾಜ್ ಕಡಂಬ, ರವಿ ಪೂಜಾರಿ, ವಿಕ್ಟರ್ ಪಾಯ್ಸ್, ಸುರೇಶ್ ಜೊರಾ, ಹಾಗೂ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ, ಮಹಿಳಾ ಅಧ್ಯಕ್ಷರಾಗಿ ವಸಂತಿ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಬಿವೃಧ್ದಿ ಬ್ಯಾಂಕ್ ಅಧ್ಯಕ್ಷರಾದ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಜಗದೀಶ್ ಕೊಯಿಲ, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯನ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಮುಖಂಡರಾದ ಅಶೋಕ್ ಮೈರನ್‌ಪಾದೆ, ಪಂಚಾಯತ್ ಸಧ್ಯಸರಾದ ವಿಶ್ವನಾಥ ಶೆಟ್ಟಿ, ಜಯಶ್ರೀ, ಪಕ್ಷದ ಮುಖಂಡರು ಹಾಗೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿಧ್ದರು. ದೇವಪ್ಪ ಕುಲಾಲ್ ಸ್ವಾಗತಿಸಿ ರಾಜೇಶ್ ಗೌಡ ಧನ್ಯವಾದವಿತ್ತರು.
www.bantwalnews.com Editor: Harish Mambady For Advertisements Contact: 9448548127
Be the first to comment on "ಪಕ್ಷದ ಘನತೆ ಎತ್ತಿ ಹಿಡಿಯುವ ಕಾರ್ಯ: ಕಾರ್ಯಕರ್ತರ ಸಭೆಯಲ್ಲಿ ರೈ"