ತೆರಿಗೆ ಪಾವತಿಸದ ಮೊಬೈಲ್ ಟವರ್: ನೋಟಿಸ್ ಜಾರಿಗೊಳಿಸಿ – ಸಚಿವ ಕೋಟ

ಮಂಗಳೂರು:  ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ  ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು  ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಾಹೀರಾತು

ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಹೀರಾತು

ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿರುವ ಸರ್ಕಾರಿ ಜಮೀನುಗಳನ್ನು ಸರ್ವೆ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯ ಬದ್ಧವಾಗಿ ವಿತರಿಸಿ  ಎಂದು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ: ಕನ್ನಡ ರಾಜೋತ್ಸವ ಪ್ರಶಸ್ತಿ ಆಯ್ಕೆ ಮಾಡುವ ಸಂದರ್ಭದಲ್ಲಿ  ನಿಯಾಮಾನುಸಾರವಾಗಿ ಸರಕಾರದ ಮಾನದಂಡದ ಮೂಲಕ ಆಯ್ಕೆ ಮಾಡಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀರಿಕ್ಷೆ ಇದ್ದವರಿಗೆ ಅಲ್ಲಿ ಪ್ರಶಸ್ತಿ ಸಿಗದೆ ಇದ್ದಾಗ ಜಿಲ್ಲಾ ಮಟ್ಟದಲ್ಲಿ ನೀಡೋದು ಸಮಾಧಾನಕರವಾಗಿರುತ್ತದೆ ಎಂದ ಸಚಿವ, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬಂದಿರುವಂತಹ ಅರ್ಜಿಗಳ ಮಾಹಿತಿ ಪಡೆದರು.ಎಲ್ಲಾ ಕ್ಷೇತ್ರಗಳಿಗೆ ಹಂಚಿಕೆಯಾಗುವಂತೆ ಕನಿಷ್ಠ 25 ಪ್ರಶಸ್ತಿಗಳನ್ನು ನೀಡಬೇಕು ಎಂದು ತಿಳಿಸಿದರು.

 ಅಬ್ಬಕ್ಕ ಉತ್ಸವ: ಜಿಲ್ಲಾಡಳಿತದ ಮೂಲಕ ನಡೆಯುವಂತಹ ಪ್ರತಿ ಉತ್ಸವಗಳಿಗೆ ಸಂಬಧಪಟ್ಟ ಸಮಿತಿಗಳು ತಮ್ಮ ಸಲಹೆಗಳನ್ನು ನೀಡಬಹುದು, ಆದುದರಿಂದ ಅಬ್ಬಕ್ಕ ಉತ್ಸವಕ್ಕೆ ಸಂಬಂಧಿಸಿದ ಎರಡು ಸಮಿತಿಗಳನ್ನು ಸೇರಿಸಿ ಸಭೆ ನಡೆಸುವ ಹಾಗೂ ಅವರ ಅಭಿಪ್ರಾಯಗಳನ್ನು ಪಡೆದು ಸರಕಾರದ ನಿಯಮದ ಪ್ರಕಾರ ಉತ್ಸವ ನಡೆಸುವುದು ಸೂಕ್ತವಾದೆ. ಕರಾವಳಿ ಉತ್ಸವದ ಹಿಂದಿನ ವರ್ಷದ ಮಾದರಿಯನ್ನು ಸರಕಾರಕ್ಕೆ ನೀಡಿ ಅದರಂತೆ ಪ್ರಸ್ತುತ ಕರಾವಳಿ ಉತ್ಸವ ನಡೆಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಜಾಹೀರಾತು

ಪಿಲಿಕುಳದಲ್ಲಿ ಕಂಬಳ: ಪಿಲಿಕುಳದಲ್ಲಿ  ಜಿಲ್ಲೆಯ ಜಾನಪದ ಕಲೆಯಾದ ಕಂಬಳವನ್ನು ಜನವರಿ ಅಂತ್ಯದಲ್ಲಿ ಅಥವಾ ಫೆಬ್ರವರಿಯಲ್ಲ್ಲಿ ನಡೆಸಬಹುದಾಗಿದೆ. ಇದಕ್ಕೆ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕಂಬಳಕ್ಕೆ ಬೇಕಾಗುವ ಅನುದಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಅನುದಾನದ ಬಗ್ಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ನೀಡಿ, ಆದಷ್ಟು ಬೇಗ ಮಂಜೂರು ಮಾಡಿಸುವಂತೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಉಳ್ಳಾಲ ಶಾಸಕ ಯು ಟಿ ಖಾದರ್, ಮೂಡಬಿದ್ರೆ ಶಾಸಕ ಊಮಾನಾಥ ಕೋಟ್ಯಾನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ತೆರಿಗೆ ಪಾವತಿಸದ ಮೊಬೈಲ್ ಟವರ್: ನೋಟಿಸ್ ಜಾರಿಗೊಳಿಸಿ – ಸಚಿವ ಕೋಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*