ಬಂಟ್ವಾಳ ತಾಲೂಕಿನ ಮಂಚಿ ಸಮೀಪ ಇರಾ ಸೂತ್ರಬೈಲ್ ಎಂಬಲ್ಲಿ ಕಳ್ಳರು ಮನೆಯೊಂದನ್ನು ಪ್ರವೇಶಿಸಿ ಚಿನ್ನಾಭರಣವನ್ನು ಕದ್ದೊಯ್ದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ರಾತ್ರಿ ಸುಮಾರು 3ರಿಂದ 4 ಗಂಟೆ ವೇಳೆ ಸೂತ್ರಬೈಲು ನಿವಾಸಿ ಇಬ್ರಾಹಿಂ ರಿಯಾಜ್ ಅವರ ಮನೆಯ ಕಿಟಕಿ ಮೂಲಕ ಹಿಂಬಾಗಿಲ ಚಿಲಕ ತೆಗೆದು ಮನೆಯೊಳಗೆ ನುಗ್ಗಿದ ಕಳ್ಳರು ಎರಡು ಪವನ್ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ
ಕಳ್ಳರು ಮನೆಯವರು ಮಲಗಿದ್ದ ಕೋಣೆಯಲ್ಲಿದ್ದ ಕಪಾಟಿನಲ್ಲಿ ಇಟ್ಟಿದ್ದ ಅಂದಾಜು ಎರಡು ಪವನ್ ತೂಕದ ಚಿನ್ನದ ಸರ ಮತ್ತು ಬ್ರಾಸ್ ಲೈಟ್ ಕದ್ದೊಯ್ಯಲಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಮನೆಯ ಹತ್ತಿರ ಇನ್ನೊಂದು ಮನೆಗೂ ನುಗ್ಗಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದ್ದು, ಸ್ಥಳ ಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಬೇಟಿ ನೀಡಿದ್ದಾರೆ. ಗ್ರಾಮಾಂತರ ಎಸ್.ಐ.ಪ್ರಸನ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…