ಬಂಟ್ವಾಳ

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಫಲಾನುಭವಿಗಳ ಅಕೌಂಟ್ ಗೆ ಹಣ: ಆರ್.ಅಶೋಕ್

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಪರಿಹಾರ ಧನವನ್ನು ಚೆಕ್ ಬದಲು ಅಕೌಂಟ್ ಗೆ ಆರ್.ಟಿ.ಜಿ.ಎಸ್. ಮೂಲಕ ಅವರ ಬ್ಯಾಂಕ್ ಖಾತೆಗೆ ಹಾಕಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಜಾಹೀರಾತು

ಸೋಮವಾರ ಬಿ.ಸಿ.ರೋಡ್ ಮಿನಿ ವಿಧಾನಸೌಧ ಮುಂಭಾಗ 94ಸಿ,94ಸಿಸಿ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಸರಕಾರ ನಿಭಾಯಿಸುತ್ತಿದೆ. ನಿವೇಶನರಹಿತರಿಗೆ ನಿವೇಶನ, ಅರಣ್ಯಪ್ರದೇಶದಲ್ಲಿ ವಾಸ್ತವ್ಯವಿರುವವರಿಗೆ ಅದೇ ಜಮೀನಿಗೆ ಹಕ್ಕುಪತ್ರ ನೀಡುವುದು ಹೀಗೆ ಸರಕಾರವು ಬಡವರ ನೆರವಿಗೆ ಸದಾ ಬದ್ಧ ಎಂದರು.

ನಮ್ಮ ಸರಕಾರ ಅಚಲವಾಗಿದ್ದು,ಮುಂದಿನ ಮೂರುವರೇ ವರ್ಷಗಳ ಕಾಲ ಬಿಎಸ್ ವೈ.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸರಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಆರ್.ಆಶೋಕ್ ಹೇಳಿದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ,  ಡೀಮ್ಡ್ ಫಾರೆಸ್ಟ್, ಕುಮ್ಕಿ ಹಕ್ಕು, ಮೂಲಗೇಣಿ, ಗೇರುಲೀಝ್ ಮೊದಲಾದ ಭೂಮಿ ಹಕ್ಕಿನ ಗೊಂದಲಗಳ ಕುರಿತು ಸರಕಾರ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕೆಂದರು. ಜತೆಗೆ ದ.ಕ.ಜಿಲ್ಲಾ„ಕಾರಿ ಕಚೇರಿ ಸಂಕೀರ್ಣದ ಕಾಮಗಾರಿ ವೇಗ ಪಡೆಯುವ ನಿಟ್ಟಿನಲ್ಲಿ ಕಂದಾಯ ಸಚಿವರು ಸೂಕ್ತ ನಿರ್ದೇಶನ ನೀಡಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಬಂಟ್ವಾಳ ತಾಲೂಕು ಕೇಂದ್ರಕ್ಕೆ ಹೊಸ ಆಯಾಯವನ್ನು ನೀಡುವ ನಗರ ಸುಂದರೀಕರಣ ಯೋಜನೆಗೆ ಒಂದೂವರೆ ವರ್ಷಗಳ ಸತತ ಪ್ರಯತ್ನದ ಫಲವಾಗಿ ಪ್ರಸ್ತುತ ಚಾಲನೆಯ ಹಂತಕ್ಕೆ ತಲುಪಿದೆ ಎಂದರು.
ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ಮಾತನಾಡಿ, ಕಂದಾಯ ಸಚಿವರು ಪ್ರಾಪರ್ಟಿ ಕಾರ್ಡ್ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಮಂಗಳೂರಿನ ಜನತೆ ನಿಟ್ಟುಸಿರು ಬಿಡುವಂತೆ ಮಾಡಿರುವುದಕ್ಕೆ ಸಚಿವರನ್ನು ಅಭಿನಂದಿಸಿದರು.

ಶಾಸಕರಾದ ಡಿ.ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಮಂಜುಳಾ ಮಾವೆ, ಎಂ.ಎಸ್.ಮಹಮ್ಮದ್, ಬಿ.ಪದ್ಮಶೇಖರ್ ಜೈನ್, ಕಮಲಾಕ್ಷಿ ಪೂಜಾರಿ, ರವೀಂದ್ರ ಕಂಬಳಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷ ಧನಲಕ್ಷ್ಮಿ ಸಿ.ಬಂಗೇರ, ದ.ಕ.ಜಿ.ಪಂ.ಸಿಇಓ ಡಾ| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾ„ಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಈ ಸಂದರ್ಭ ತಾಲೂಕಿನ ಸುಮಾರು 734 ಮಂದಿ ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿಯಲ್ಲಿ ಹಕ್ಕುಪತ್ರ ವಿತರಿಸಲಾಯಿತು.

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಸ್ವಾಗತಿಸಿದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಫಲಾನುಭವಿಗಳ ವಿವರ ನೀಡಿದರು.ತಾಪಂ ಇಒ ರಾಜಣ್ಣ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts