ಬಂಟ್ವಾಳ

ಕಡತ ಶೀಘ್ರ ವಿಲೇವಾರಿಗೆ ಗ್ರಾಪಂ ಪ್ರತಿನಿಧಿಗಳ ಒಕ್ಕೂಟ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಬೇಡಿಕೆಗಳಿಗೆ ಸಲ್ಲಿಸಿರುವ ಜಮೀನು ಕಾದಿರುಸುವಿಕೆ ಜಮೀನಿನ ಕಡತಗಳನ್ನು ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ಕಂದಾಯ ಸಚಿವ ಆರ್.ಆಶೋಕ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈಗಾಗಲೇ ಘನತ್ಯಾಜ್ಯ, ಸ್ಮಶಾನ, ದಫನ ಭೂಮಿ, ನಿವೇಶನ ಇತ್ಯಾದಿ ಸಾರ್ವಜನಿಕ ಉದ್ದೇಶಗಳಿಗೆ ಗ್ರಾಮ ಪಂಚಾಯತ್ ಗಳು ಗುರುತಿಸಿ ಬೇಡಿಕೆ ಸಲ್ಲಿಸಿರುವ ಜಮೀನು ಕಾದಿರಿಸುವಿಕೆ ಕಡತಗಳು ಕಂದಾಯ ಇಲಾಖೆಯ ವಿವಿಧ ಹಂತಗಳಲ್ಲಿ ವಿಳಂಬವಾಗುತ್ತಿರುವುದರಿಂದ ಗ್ರಾಮಸ್ಥರ ಮೂಲಭೂತ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ತೊಂದರೆಯಾಗುತ್ತಿದೆ ಎಂದು  ಮನವಿಯಲ್ಲಿ ತಿಳಿಸಲಾಗಿದೆ.

ಒಕ್ಕೂಟದ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಂದಾಯ ಸಚಿವ ಆರ್.ಅಶೋಕ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಇದಕ್ಕೆ ಸ್ಪಂದಿಸಿದ ಸಚಿವರು ಈ  ವಿಷಯದ ಬಗ್ಗೆ ಪ್ರಥಮ ಆದ್ಯತೆ ನೀಡುವುದಲ್ಲದೆ ಸರಕಾರದ ಮಟ್ಟದಲ್ಲೂ ವಿಶೇಷ ಗಮನ ಹರಿಸುವುದಾಗಿ ಭರವಸೆ ನೀಡಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಒಕ್ಕೂಟದ ಸದಸ್ಯರಾದ ಪವಿತ್ರ ಪೂಂಜಾ ಮೊದಲಾದವರಿದ್ದರು.

www.bantwalnews.com Editor: Harish Mambady For Advertisements Contact: 9448548127

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts