ಸುಮಾರು 20 ಕೋಟಿ ರೂ. ಅಂದಾಜು ವೆಚ್ಚದ ಬಿ.ಸಿ.ರೋಡ್ ಸುಂದರೀಕರಣ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಮೇಲ್ಸೆತುವೆಯ ಅಡಿಭಾಗದಲ್ಲಿ ಯೋಜನೆಗೆ ಶಿಲಾನ್ಯಾಸ ನೆರವೇರಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್. ಅಶೋಕ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ.ಸದಸ್ಯ ರಾದ ತುಂಗಪ್ಪ ಬಂಗೇರ, ಕಮಾಲಾಕ್ಷಿ ಕೆ.ಪೂಜಾರಿ, ರವೀಂದ್ರ ಕಂಬಳಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಮೀಪ್ರಸಾದ್, ಪುತ್ತೂರು ಡಿ.ವೈಎಸ್ ಪಿ ದಿನಕರ ಶೆಟ್ಟಿ, ಜಿ.ಪಂ.ಸಿಇಒ ಡಾ .ಆರ್ ಸೆಲ್ವಮಣಿ, ಎನ್.ಎಚ್.ಎ.ಐ.ನ ಪ್ರಾಜೆಕ್ಟ್ ಡೈರೆಕ್ಟರ್ ಶಿಶುಮೋಹನ್ , ತಹಶೀಲ್ದಾರ್ ರಶ್ಮಿ .ಎಸ್ .ಆರ್, ವಿನ್ಯಾಸಕಾರ ಧರ್ಮರಾಜ್, ಪುರಸಭಾ ಸದಸ್ಯ ಗೋವಿಂದ ಪ್ರಭು ಎ.ಜೆ.ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರಶಾಂತ್ ಮಾರ್ಲ, ಬಂಟವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, ಪ್ರಮುಖರಾದ ಜಿ.ಆನಂದ, ಬಿ.ದೇವದಾಸ ಶೆಟ್ಟಿ, ಕೆ.ಹರಿಕೃಷ್ಣ ಬಂಟ್ವಾಳ್, ಸುಲೋಚನಾ ಜಿ. ಕೆ.ಭಟ್, ಸಂತೋಷ್ ಕುಮಾರ್ ರೈ ಬೋಳಿಯಾರ್, ರಾಮದಾಸ ಬಂಟ್ವಾಳ, ಪ್ರಭಾಕರ ಪ್ರಭು, ಮೋನಪ್ಪ ದೇವಸ್ಯ, ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ, ರಮೇಶ್ ಕುಡ್ಮೇರು,ದಿನೇಶ್ ಅಮ್ಟೂರು, ಪ್ರಮೋದ್ ಅಜ್ಜಿಬೆಟ್ಟು, ಖಲೀಲ್ ಬಂಟ್ವಾಳ, ರೋನಾಲ್ಡ್ ಡಿಸೋಜ,ತಾಪಂ,ಪುರಸಭಾ ಬಿಜೆಪಿ ಸದಸ್ಯರು, ತಾ.ಪಂ.ಇ.ಒ.ರಾಜಣ್ಣ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ಕುಮಾರ್, ಎನ್.ಎಂಪಿ.ಟಿ, ಎಂ. ಅರ್.ಪಿ.ಎಲ್, ಒ.ಎನ್.ಜಿ.ಸಿ.ಎಚ್.ಪಿ, ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಕಂಪನಿಯ ಮುಖ್ಯಸ್ಥರು, ಮಂಗಳೂರಿನ ವಿನ್ಯಾಸಕಾರ ಧರ್ಮರಾಜ್ ಮತ್ತಿತರರು ಹಾಜರಿದ್ದರು.
www.bantwalnews.com Editor: Harish Mambady For Advertisements Contact: 9448548127
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…