ಮಸೀದಿ ಆವರಣಗೋಡೆಯೊಳಗೆ ನುಗ್ಗಿದ ಕಾರು
ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರು ಮಸೀದಿಯ ಆವರಣಗೋಡೆಯೊಳಗೆ ನುಗ್ಗಿದ ಪರಿಣಾಮ ಚಾಲಕ ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ.
ಫರಂಗಿಪೇಟೆ ಸಮೀಪದ 10ನೇ ಮೈಲುಕಲ್ಲು ಎಂಬಲ್ಲಿ ಮಂಗಳವಾರ ಘಟನೆ ನಡೆದಿದ್ದು, ಇಸ್ಮಾಯಿಲ್ ಮತ್ತು ಸುಲೈಮಾನ್ ಗಾಯಗೊಂಡಿದ್ದಾರೆ. ಓಮ್ನಿ ಕಾರು ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿರುವಾಗ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲಿರುವ ತ್ವಾಹಾ ಜುಮಾ ಮಸೀದಿಯ ಆವರಣಗೋಡೆಯಾಗಿ ಏರಿ ನಿಂತಿದೆ. ಈ ವೇಳೆ ಮಸೀದಿ ಆವರಣದಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕಾರಿನ ಮುಂಭಾಗ ಜಖಂಗೊಂಡಿದ್ದು, ಮಸೀದಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.
www.bantwalnews.com Editor: Harish Mambady For Advertisements Contact: 9448548127
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)