ಫರಂಗಿಪೇಟೆ

ಫರಂಗಿಪೇಟೆ ಸಮೀಪ ಅಪಘಾತ: ಐವರಿಗೆ ಗಾಯ

ಮಸೀದಿ ಆವರಣಗೋಡೆಯೊಳಗೆ ನುಗ್ಗಿದ ಕಾರು

ಚಾಲಕನ‌ ನಿಯಂತ್ರಣ ತಪ್ಪಿದ ಓಮ್ನಿ ಕಾರು ಮಸೀದಿಯ ಆವರಣಗೋಡೆಯೊಳಗೆ ನುಗ್ಗಿದ ಪರಿಣಾಮ ಚಾಲಕ ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ.

ಜಾಹೀರಾತು

ಫರಂಗಿಪೇಟೆ ಸಮೀಪದ 10ನೇ ಮೈಲುಕಲ್ಲು ಎಂಬಲ್ಲಿ ಮಂಗಳವಾರ ಘಟನೆ ನಡೆದಿದ್ದು, ಇಸ್ಮಾಯಿಲ್ ಮತ್ತು ಸುಲೈಮಾನ್ ಗಾಯಗೊಂಡಿದ್ದಾರೆ. ಓಮ್ನಿ ಕಾರು ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿರುವಾಗ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಕಲ್ಲು ಎಂಬಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಘಟನೆ ನಡೆದಿದೆ.  ಹೆದ್ದಾರಿ ಪಕ್ಕದಲ್ಲಿರುವ ತ್ವಾಹಾ ಜುಮಾ ಮಸೀದಿಯ ಆವರಣಗೋಡೆಯಾಗಿ ಏರಿ ನಿಂತಿದೆ. ಈ ವೇಳೆ ಮಸೀದಿ ಆವರಣದಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ‌. ಘಟನೆಯಿಂದ ಕಾರಿನ ಮುಂಭಾಗ ಜಖಂಗೊಂಡಿದ್ದು, ಮಸೀದಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ