ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರ ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಉದ್ಯೋಗ, ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಪುತ್ತೂರು ನಗರಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಉಳ್ಳಾಲ ನಗರಸಭೆ, ಬಂಟ್ವಾಳ ಪುರಸಭೆ, ಮುಲ್ಕಿ ಪಟ್ಟಣ ಪಂಚಾಯತ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಮೂಡಬಿದ್ರೆ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪಟ್ಟಣ ಪಂಚಾಯತ್, ಪುರಸಭೆಗಳಲ್ಲಿ ತಲಾ 1 ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 3 ಮಂದಿಯನ್ನು ನೇಮಕ ಮಾಡಲಾಗುವುದು. ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು,
ವಯೋಮಿತಿ -18-45 ವರ್ಷದ ಆರೋಗ್ಯವಂತರು, ವಿದ್ಯಾರ್ಹತೆ-ಎಸ್.ಎಸ್.ಎಲ್.ಸಿ ಉತ್ತೀರ್ಣ / ಅನುತ್ತೀರ್ಣರಾಗಿರಬೇಕು, ಅಂಗವಿಕಲರಾಗಿರಬೇಕು- ಭಾಗಶ: ಅಂಧರಿಗೆ, ಭಾಗಶ; ಶ್ರವಣದೋಷವುಳ್ಳವರಿಗೆ (ಮೈಲ್ಡ್ ಮತ್ತು ಮಾಡರೇಟ್)ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸುವುದು, ಅಂಗವಿಕಲತೆಯು ಶೇ.40ರಷ್ಟಿರಬೇಕು, ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರ/ಗುರುತಿನ ಚೀಟಿಯ ದಾಖಲೆ ಒದಗಿಸಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 22. ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ಈ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ: 0824-2458173,2455999 ಸಂಪರ್ಕಿಸಲು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಯಮುನಾ.ಡಿ ಇವರ ಪ್ರಕಟಣೆ ತಿಳಿಸಿದೆ.
Be the first to comment on "ನಗರ ಪುನರ್ವಸತಿ ಕಾರ್ಯಕರ್ತ- ವಿಕಲಚೇತನರಿಂದ ಅರ್ಜಿ ಆಹ್ವಾನ"