ಸರ್ಕಾರಿ ಮಾಹಿತಿ

ನಗರ ಪುನರ್ವಸತಿ ಕಾರ್ಯಕರ್ತ- ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರ ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಉದ್ಯೋಗ, ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಜಾಹೀರಾತು

ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಪುತ್ತೂರು ನಗರಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಉಳ್ಳಾಲ ನಗರಸಭೆ, ಬಂಟ್ವಾಳ ಪುರಸಭೆ, ಮುಲ್ಕಿ ಪಟ್ಟಣ ಪಂಚಾಯತ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಮೂಡಬಿದ್ರೆ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪಟ್ಟಣ ಪಂಚಾಯತ್, ಪುರಸಭೆಗಳಲ್ಲಿ ತಲಾ 1 ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 3 ಮಂದಿಯನ್ನು ನೇಮಕ ಮಾಡಲಾಗುವುದು.     ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು,

ವಯೋಮಿತಿ -18-45 ವರ್ಷದ ಆರೋಗ್ಯವಂತರು, ವಿದ್ಯಾರ್ಹತೆ-ಎಸ್.ಎಸ್.ಎಲ್.ಸಿ ಉತ್ತೀರ್ಣ / ಅನುತ್ತೀರ್ಣರಾಗಿರಬೇಕು, ಅಂಗವಿಕಲರಾಗಿರಬೇಕು- ಭಾಗಶ: ಅಂಧರಿಗೆ, ಭಾಗಶ; ಶ್ರವಣದೋಷವುಳ್ಳವರಿಗೆ (ಮೈಲ್ಡ್ ಮತ್ತು ಮಾಡರೇಟ್)ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸುವುದು, ಅಂಗವಿಕಲತೆಯು ಶೇ.40ರಷ್ಟಿರಬೇಕು, ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರ/ಗುರುತಿನ ಚೀಟಿಯ ದಾಖಲೆ ಒದಗಿಸಬೇಕು.

ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ಕೊನೆಯ ದಿನ  ನವೆಂಬರ್ 22. ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ಈ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ: 0824-2458173,2455999 ಸಂಪರ್ಕಿಸಲು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಯಮುನಾ.ಡಿ ಇವರ ಪ್ರಕಟಣೆ ತಿಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago