ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಇತ್ತೀಚೆಗೆ ನಡೆಯಿತು.
ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪನೆಯಾಯಿತು. ಅಧ್ಯಕ್ಷರಾಗಿ ನೋಣಯ್ಯ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಹೇಮಚಂದ್ರಗೌಡ, ಸೌಮ್ಯಆರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಸ್.ಪಿ, ಉಪಕಾರ್ಯದರ್ಶಿಯಾಗಿ ಪ್ರಜ್ವಲ್, ಕೋಶಾಧಿಕಾರಿಯಾಗಿ ರಾಘವೇಂಧ್ರ ಭಟ್, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನೋಣಯ್ಯ ಮೂಲ್ಯ, ಗೌರವಅಧ್ಯಕ್ಷರಾಗಿ ಧರ್ಮರಾಜ್, ಪತ್ರಿಕಾ ಕಾರ್ಯದರ್ಶಿಯಾಗಿ ಜಯಲಕ್ಷ್ಮಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕೇಶವ ಶೆಟ್ಟಿಗಾರ್, ಕರುಣಾಕರಗೌಡ, ಯೋಗೀಶ್, ಸುರೇಶ್ ಕುಲಾಲ್, ಗುರುಪ್ರಸಾದ್, ಇಂಬ್ರಾನ್‌ಖಾನ್, ರಮೇಶ್ ಶೆಣೈ, ರಾಮಕೃಷ್ಣ, ಗುರುರಾಜ್ ಅವರನ್ನು ಆಯ್ಕೆ ಮಾಡಲಾಯಿತು. ಸಂಘದ ಧ್ಯೇಯೋದ್ದೇಶಗಳ ಬಗ್ಗೆ ಚರ್ಚಿಸಲಾಯಿತು. ಶಾಲಾ ವೈಸ್ ಪ್ರಿನ್ಸಿಪಾಲ್ ರಮಾನಂದ ಪ್ರಾಸ್ತಾವಿಕವಾಗಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿಯಲ್ಲಿ ಹಳೆ ವಿದ್ಯಾರ್ಥಿ ಸಂಘ ಶಾಲೆಯ ಜೊತೆಕೈಜೋಡಿಸಲು ಕರೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಹಿರಿಯ ಶಿಕ್ಷಕರಾದ ಮಮತಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…