ಬಂಟ್ವಾಳ

ದೆಹಲಿ ಚುಟುಕು ಕವಿಗೋಷ್ಠಿಯಲ್ಲಿ ಗಮನ ಸೆಳೆದ ಜಿಲ್ಲೆಯ ಕವಿಗಳು

ದೆಹಲಿ ಕರ್ನಾಟಕ ಸಂಘ ಮತ್ತು ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ದೆಹಲಿ ಕನ್ನಡ ಸಂಘ ಸಭಾಭವನದಲ್ಲಿ  ಏರ್ಪಡಿಸಲಾದ ಅಂತಾರಾಜ್ಯ ಮಟ್ಟದ ಚುಟುಕು ಸಾಹಿತ್ಯ ಕವಿಗೋಷ್ಠಿಯಲ್ಲಿ ಬಂಟ್ವಾಳ ಸಹಿತ ದ.ಕ, ಕಾಸರಗೋಡಿನಿಂದ ತೆರಳಿದ ಕವಿಗಳು ಗಮನ ಸೆಳೆದರು.

ಜಾಹೀರಾತು

ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಸಂಚಾಲಕ ಚುಟುಕು ಕವಿ ವೇ.ಮೂ.ಜನಾರ್ದನ ಭಟ್ ಮೊಗರ್ನಾಡು ಅಧ್ಯಕ್ಷತೆ ವಹಿಸಿದ್ದರು.

ಕವಿಗೋಷ್ಠಿಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕನ್ಯಾನದ ಕನ್ನಡ ಭಾಷಾ ಶಿಕ್ಷಕಿ ಶಾಂತಾ ಪುತ್ತೂರು, ಉಪನ್ಯಾಸಕ ಬಂಟ್ವಾಳದ ಪತ್ರಕರ್ತ ಜಯಾನಂದ ಪೆರಾಜೆ, ಚಂದ್ರಿಕಾ ಡಿ. ಕೈರಂಗಳ ,ಸುರೇಖ ಯಳವಾರ ಬಂಟ್ವಾಳ,  ವಿಜಯಲಕ್ಷ್ಮೀ ಕಟೀಲು, ಮಲ್ಲಿಕಾ ಜೆ. ರೈ ಪುತ್ತೂರು, ಆಕೃತಿ ಎಸ್. ಭಟ್ ಮಂಗಳೂರು, ಬದ್ರುದ್ದೀನ್ ಕೂಳೂರು, ಅಪರ್ಣ ಆಳ್ವ, ಗುಣವತಿ ಕಿನ್ಯ , ಪ್ರಮೀಳ ಚುಳ್ಳಿಕಾನ, ಪ್ರಭಾವತಿ ಕೆದಿಲಾಯ ,ಪ್ರೇಮ ಉದಯ ಕುಮಾರ್, ಕುಶಾಲಾಕ್ಷಿ ಕಣ್ವತೀರ್ಥ, ಹರೀಶ ಸುಲಾಯ ಒಡ್ಡಂಬೆಟ್ಟು, ಅಭ್ಯುದಯ ಜೈನ್ ಸೇರಿದಂತೆ ೨೮ ಮಂದಿ ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು.

ಅತಿಥಿಗಳಾಗಿ ಚು.ಸಾ.ಪ ಕಡಬ ವಲಯ ಗೌರವಾಧ್ಯಕ್ಷ ಜಯಾನಂದ ಪೆರಾಜೆ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತಡ್ಕ, ಸುಭಾಶ್ ಪೆರ್ಲ,  ಶಿಕ್ಷಕ ಹ.ಸು. ಒಡ್ಡಂಬೆಟ್ಟು, ಪರಿಸರ ಪ್ರೇಮಿ ಮಾಧವ ಉಳ್ಳಾಲ, ಡಾ. ಜಗದೀಶ ಶೆಟ್ಟಿ ಬಿಜೈ ಭಾಗವಹಿಸಿದ್ದರು.

ದ.ಕ. ಜಿಲ್ಲಾ ಚು.ಸಾ.ಪ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಅಧ್ಯಕ್ಷ ತಾರನಾಥ ಬೋಳಾರ,ದೆಹಲಿ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ , ವಸಂತ ಶೆಟ್ಟಿ ಬೆಳ್ಳಾರೆ,ಅಧ್ಯಕ್ಷ ಡಾ. ವೆಂಕಟಾಚಲ ಜಿ ಹೆಗ್ಡೆ, ಉಪಾಧ್ಯಕ್ಷ ಡಾ. ಅವನೀಂದ್ರ ರಾವ್, ಕಾರ್ಯದರ್ಶಿ ಸಿ.ಎಮ್. ನಾಗರಾಜ ,ಕವಿ ಸುಭಾಷ್ ಪೆರ್ಲ, ಡಾ. ರತ್ನ ಹಾಲಪ್ಪ ಗೌಡ  ಉಪಸ್ಥಿತರಿದ್ದು ಶುಭ ಹಾರೈಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago