ಕಿತ್ತೂರು ರಾಣಿ ಚೆನ್ನಮ್ಮ ತೋರಿಸಿದ ಧೈರ್ಯ, ಸಾಹಸ, ಸತ್ಯದ ಪರವಾದ ಹೋರಾಟ ನಮ್ಮೆಲ್ಲರಿಗೂ ಸ್ಫೂರ್ತಿಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವತಿಯಿಂದ ಬಂಟ್ವಾಳ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ಬುಧವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿರಸ್ತೇದಾರ್ ಶ್ರೀಧರ್ ಪುಟ್ಟ ಸಂಸ್ಥಾನದ ರಾಣಿ ಚೆನ್ನಮ್ಮ ಬ್ರಿಟಿಷರು ವಿರುದ್ಧ ಹೋರಾಟ ಮಾಡಿ ಆಧುನಿಕ ಶಸ್ತ್ರಾಸ್ತ್ರ ಹೊಂದಿದ ಬ್ರಿಟಿಷ್ ಸಾಮ್ರಾಜ್ಯವನ್ನು ನಡುಗಿಸಿದ ರೀತಿ ಅದ್ಭುತ ಎಂದರು.
ಈ ಸಂದರ್ಭ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ, ಪಾಣೆಮಂಗಳೂರು ಹೋಬಳಿ ನಾಡಕಚೇರಿ ಉಪತಹಶೀಲ್ದಾರ್ ರೂಪೇಶ್ ಕುಮಾರ್. ಸರ್ವೆ ಇಲಾಖೆಯ ಸುಪರ್ವೈಸರ್ ರಮಾದೇವಿ,ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು. ಗ್ರಾಮ ಲೆಕ್ಕಾಧಿಕಾರಿಗಳು. ಗ್ರಾಮ ಸಹಾಯಕರು. ಸಾರ್ವಜನಿಕರು ಹಾಜರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ನಿರೂಪಿಸಿದರು. ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಕುಮಾರ್ ಪಕ್ಕಳ ಸ್ವಾಗತಿಸಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು ವಂದಿಸಿದರು.