ಸಜಿಪನಡು ಗ್ರಾಮವನ್ನು ಉಳ್ಳಾಲ ತಾಲೂಕಿಗೆ ಸೇರ್ಪಡೆ ಮಾಡದಂತೆ ಹಾಗೂ ಸಜಿಪನಡು ಗ್ರಾಮವನ್ನು ಬಂಟ್ವಾಳ ತಾಲೂಕಿನಲ್ಲಿ ಉಳಿಸುವಂತೆ ಆಗ್ರಹಿಸಿ ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ನಾಸಿರ್ ಸಜಿಪ ನೇತೃತ್ವದ ನಿಯೋಗವು ದ.ಕ. ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮಂಗಳೂರು ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು.
ಉಳ್ಳಾಲ ತಾಲೂಕು ಸೇರ್ಪಡೆ ವಿರೋಧಿಸಿ ಕಂದಾಯ ಸಚಿವ ಆರ್. ಅಶೋಕ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಯು.ಟಿ.ಖಾದರ್, ಜಿಲ್ಲಾಧಿಕಾರಿ ಅವರಿಗೂ ಮನವಿ ಸಲ್ಲಿಸಲಾಗಿದೆ ಎಂದು ಸಜಿಪನಡು ಗ್ರಾಪಂ ಅಧ್ಯಕ್ಷ ನಾಸಿರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಮೊಕ್ತೇಸರ ಮುಳ್ಳಿಂಜ ವೆಂಕಟೇಶ್ವರ ಭಟ್, ಜೆರಿ ಮೊರಸ್, ಗ್ರಾಪಂ ಸದಸ್ಯರಾದ ಅಬ್ದುಲ್ ರಹಿಮಾನ್, ಸುರೇಶ್ ಬಂಗೇರ ಹಾಜರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…