ಬಂಟ್ವಾಳ ಠಾಣೆ ಮೇಲ್ದರ್ಜೆಗೆ, ಕಡಲತಡಿಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ

ಉನ್ನತ ಅಧಿಕಾರಿಗಳ ಜೊತೆ ಬಂಟ್ವಾಳದಲ್ಲಿ ಗೃಹಸಚಿವ ಬೊಮ್ಮಾಯಿ ಸಭೆ

ಜಾಹೀರಾತು

ಬಂಟ್ವಾಳಕ್ಕೆ ಗುರುವಾರ ಆಗಮಿಸಿದ ಗೃಹಸಚಿವ ಬಸವರಾಜ ಬೊಮ್ಮಾಯಿ, ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಬೆಳಗ್ಗೆ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಪಶ್ಚಿಮವಲಯದ  ಐಜಿಪಿ ಅರುಣ್ ಚಕ್ರವರ್ತಿ, ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್, ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್, ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡೆ, ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲಾ‌ಎಸ್ಪಿ ಕಛೇರಿ ಸ್ಥಳಾಂತರದ ಬಗ್ಗೆ  ಶೀಘ್ರದಲ್ಲೇ ‌ಬೆಂಗಳೂರಿನಲ್ಲಿ ಸಭೆ ನಡೆಸಿ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು. ಶಾಸಕ ರಾಜೇಶ್ ನಾಯ್ಕ್ ಸಲಹೆಯಂತೆ ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು, ಬಂಟ್ವಾಳ ನಗರ ಹಾಗೂ ಗ್ರಾಮಾಂತರಕ್ಕೆ ಪ್ರತ್ಯೇಕ ವೃತ್ತನಿರೀಕ್ಷಕರನ್ನು ನೇಮಿಸಲಾಗುವುದು, ಸೂಕ್ಷ್ಮ ಪ್ರದೇಶವಾದ ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಕರಾವಳಿಯ ಭದ್ರತಾ ಪಡೆಯ ಬಲವರ್ಧನೆಗೊಳಿಸಿ, ತೀರ ಪ್ರದೇಶ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಿದ್ದಾಗಿ ಹೇಳಿದರು.

ಜಾಹೀರಾತು

ಶಾಸಕ ಯು.ರಾಜೇಶ್ ನಾಯ್ಕ್ , ಬಂಟ್ವಾಳ ಕೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾ ಸದಸ್ಯ ಗೋವಿಂದ ಪ್ರಭು ,ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಜಿ.ಕೆ.  ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ತಾಪಂ ಸದಸ್ಯ ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ, ಉದಯಕುಮಾರ್ ರಾವ್ ಬಂಟ್ವಾಳ, ರಮಾನಾಥ ರಾಯಿ, ಸುದರ್ಶನ್ ಬಜ ಮೊದಲಾದವರಿದ್ದರು. ಸಚಿವರನ್ನು ಶಾಸಕ ಯು.ರಾಜೇಶ್ ನಾಯ್ಕ್ ಹಾಗೂ ತಹಸೀಲ್ದಾರ್ ರಶ್ಮೀ ಎಸ್.ಆರ್. ಸ್ವಾಗತಿಸಿದರು. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್, ಎಸ್ಸೈಗಳಾದ ಚಂದ್ರಶೇಖರ್, ಪ್ರಸನ್ನ ಸಹಿತ ವಿವಿಧ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಬಂದೋಬಸ್ತ್ ವಹಿಸಿದ್ದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಂಟ್ವಾಳ ಠಾಣೆ ಮೇಲ್ದರ್ಜೆಗೆ, ಕಡಲತಡಿಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*