ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಸೋಮವಾರ ದೀಪಾವಳಿಯನ್ನು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಆಚರಿಸಿದರು.
ದ.ಕ .ಜಿಲ್ಲೆಯಲ್ಲಿ 92ಸಾವಿರ ಮಂದಿ ಕಾರ್ಡ್ ಪಡೆದುಕೊಂಡಿದ್ದು, 8ಸಾವಿರಕ್ಕಿಂತಲೂ ಅಧಿಕ ಜನ ಫಲಾನುಭವಿಗಳು ಆಸ್ಪತ್ರೆ ಯಲ್ಲಿ ಪ್ರಯೋಜನ ಪಡೆದಿದ್ದಾರೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ ಆಯುಸ್ಮಾನ್ ಭಾರತ್ ಯೋಜನೆಯ ಮೂಲಕ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವ ಪ್ರಧಾನಿ ಮೋದಿ ಕನಸಿನ ಯೋಜನೆ ಯಶಸ್ವಿಯಾಗಲು ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದರು.ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ . ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು. ಆಯುಸ್ಮಾನ್ ಭಾರತ್ ಜಿಲ್ಲಾ ಸಂಯೋಜನಾಧಿಕಾರಿ ಅಧಿಕಾರಿ ಸಚ್ಚಿದಾನಂದ ಎಂ.ಎಲ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ಸಂಸದ, ಶಾಸಕರ ದೀಪಾವಳಿ"